RBI Restrictions: ಗ್ರಾಹಕರಿಗೆ ಬಿಗ್ ಶಾಕ್! ಕರ್ನಾಟಕದ ಈ ಬ್ಯಾಂಕ್ ಇಂದಿನಿಂದ ಬಂದ್
ಆರ್ಬಿಐ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಐದು ಬ್ಯಾಂಕ್‌ಗಳು ಮುಂದಿನ 6 ತಿಂಗಳ ಕಾಲ ಯಾವುದೇ ಸಾಲವನ್ನು ನೀಡುವಂತಿಲ್ಲ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ಐದು ಸಹಕಾರಿ ಬ್ಯಾಂಕ್‌ಗಳ ಮೇಲೆ ಹಣ ಡ್ರಾ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ನಿರ್ಬಂಧಗಳನ್ನು ವಿಧಿಸಿ ಆದೇಶ ಜಾರಿ ಮಾಡಿದೆ. ಬ್ಯಾಂಕ್ನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆರ್ಬಿಐ ಈ ಆದೇಶ ಹೊರಡಿಸಿದೆ.

ಆರ್ಬಿಐ ಆದೇಶ ಪ್ರತಿಯಲ್ಲಿ ನೀಡಿರುವ ಮಾಹಿತಿಯಂತೆ ಈ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿರುತ್ತವೆ. ಆರ್ಬಿಐ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು ಆರ್‌ಬಿಐನ ಪೂರ್ವಾನುಮತಿ ಇಲ್ಲದೆ, ಸಾಲಗಳನ್ನು ನೀಡಲು, ಯಾವುದೇ ಹೂಡಿಕೆ ಮಾಡಲು ಮತ್ತು ಯಾವುದೇ ಜವಾಬ್ದಾರಿಯನ್ನು ಹೊಂದಲು ಮತ್ತು ಅದರ ಯಾವುದೇ ಆಸ್ತಿಯನ್ನು ವರ್ಗಾಯಿಸಲು ಅಥವಾ ವಿಲೇವಾರಿ ಮಾಡಲು ಸಾಧ್ಯವಿಲ್ಲ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿರುವ ಶಿಂಷಾ ಸಹಕಾರ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ ವಿಧಿಸಿದೆ. ಈ ಬ್ಯಾಂಕ್ನಲ್ಲಿ ಹಣ ಇಟ್ಟಿರುವ ಗ್ರಾಹಕರು ಮುಂದಿನ ಆರು ತಿಂಗಳವರೆಗೂ ಯಾವುದೇ ರೀತಿಯಲ್ಲಿ ಹಣ ಡ್ರಾ ಮಾಡುವಂತಿಲ್ಲ ಎಂದು ತಿಳಿಸಿದೆ.

ಉಳಿದಂತೆ ಉತ್ತರ ಪ್ರದೇಶದ ಲಕ್ನೋದಲ್ಲಿರುವ HCBL ಸಹಕಾರ ಬ್ಯಾಂಕ್, ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್ ಮೇಲೂ ಇದೇ ರೀತಿ ನಿರ್ಬಂಧ ವಿಧಿಸಲಾಗಿದೆ.

ಆಂಧ್ರ ಪ್ರದೇಶದ ಅನಂತಪುರದ ಜಿಲ್ಲೆಯ ಉರವಕೊಂಡ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಮತ್ತು ಮಹಾರಾಷ್ಟ್ರದ ಅಕ್ಲುಜ್ನಲ್ಲಿರುವ ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಮೇಲೂ ನಿರ್ಬಂಧ ವಿಧಿಸಿದ್ದು, ಆದರೆ ಗ್ರಾಹಕರು ಗರಿಷ್ಠ 5,000 ರೂಪಾಯಿಗಳನ್ನು ವಿತ್ಡ್ರಾ ಮಾಡಬಹುದಾಗಿದೆ.

ಆದರೆ, ಎಲ್ಲಾ ಐದು ಸಹಕಾರಿ ಬ್ಯಾಂಕ್‌ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ನಿಂದ ತಮ್ಮ ತಮ್ಮ ಠೇವಣಿ ವಿಮೆ ಕ್ಲೈಮ್ ಮೊತ್ತದಲ್ಲಿ 5 ಲಕ್ಷ ರೂಪಾಯಿ ವರೆಗಿನ ಮೊತ್ತವನ್ನು ಪಡೆದುಕೊಳ್ಳಬಹುದು ಎಂದು ಆರ್ಬಿಐ ತಿಳಿದಿದೆ.

ಆರ್ಬಿಐ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಐದು ಬ್ಯಾಂಕ್‌ಗಳು ಮುಂದಿನ 6 ತಿಂಗಳ ಕಾಲ ಯಾವುದೇ ಸಾಲವನ್ನು ನೀಡುವಂತಿಲ್ಲ.
Post a Comment