[13/03, 12:25 PM] Cm Ps: *ರಾಜ್ಯದಲ್ಲಿ ಮೋದಿ ಸುನಾಮಿ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹುಬ್ಬಳ್ಳಿ, ಮಾರ್ಚ್ 13: ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಮೋದಿಯವರು ಭಾರತದ ಮಹಾನ್ ನಾಯಕ, ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ಭಾರತವನ್ನು ಅಭಿವೃದ್ಧಿ ಪಥದಲ್ಲಿ ನಡೆಸಿ ಕೋವಿಡ್ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದಾರೆ ಎಂದರು.
ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ ಹುಬ್ಬಳ್ಳಿಯಲ್ಲಿ ಔಪಚಾರಿಕವಾಗಿ ಭೇಟಿ ಆಗಿದ್ದಷ್ಟೇ. ನಮ್ಮ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ವಿ.ಸೋಮಣ್ಣ ಜತೆಗೇ ಇದ್ದಾರೆ. ಮುಂದೆಯೂ ಇರ್ತಾರೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂ ನವರೊಂದಿಗೆ ನಮ್ಮ ಸಚಿವರು ಸಂಪರ್ಕದಲ್ಲಿದ್ದಾರೆ. ಸಮಸ್ಯೆ ಬಗೆಹರಿಸಲಾಗುವುದು ಎಂದರು.
[13/03, 2:09 PM] Cm Ps: ಗದಗ, ಮಾರ್ಚ್ 13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೋಣ ತಾಲ್ಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮತ್ತು ರೋಣ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಸಚಿವರಾದ ಬಿ.ಎ.ಬಸವರಾಜ, ಸಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಳಕಪ್ಪ ಬಂಡಿ, ಶಾಸಕರಾದ ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು, ರೋಣ ಪುರಸಭೆ ಅಧ್ಯಕ್ಷೆ ರಂಗಮ್ಮ ಸುರೇಶ ಭಜಂತ್ರಿ,ಮೊದಲಾದವರು ಉಪಸ್ಥಿತರಿದ್ದರು.
[13/03, 3:53 PM] Cm Ps: *ಲಕ್ಕುಂಡಿ ಹಂಪಿ ಸರ್ಕ್ಯೂಟ್ ನ ಭಾಗವಾಗಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಗದಗ,ಮಾರ್ಚ್ 13 :
ಹಂಪಿ ಸರ್ಕ್ಯೂಟ್ ನಲ್ಲಿ ಲಕ್ಕುಂಡಿಯನ್ನು ಸೇರಿಸಲು ಈಗಾಗಲೇ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಲಕ್ಕುಂಡಿ ಕ್ಷೇತ್ರವು ಹಂಪಿ ಸರ್ಕೀಟ್ ನ ಭಾಗವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರೋಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
*ರೋಣದ ಅಭಿವೃದ್ದಿಗೆ ಎಲ್ಲ ಕ್ರಮ*
ರೋಣ ಕ್ಷೇತ್ರದಲ್ಲಿ ಕೈಗಾರಿಕಾ ಅಭಿವೃದ್ದಿಯಾಗಿಲ್ಲ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಇಡೀ ರಾಜ್ಯದ ಅಭಿವೃದ್ಧಿಗೆ ಬದ್ದವಾಗಿದೆ. ರೋಣದ ಅಭಿವೃದ್ದಿಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
*ದಾಖಲೆ ಪಡೆದು ಪರಿಹಾರ :*
ಕೋವಿಡ್ ನಿಂದಾಗಿ ಮೃತಪಟ್ಟ ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರ ಕುಟುಂಬದವರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವಿವರ ತರಿಸಿಕೊಂಡು, ಕೋವಿಡ್ ನಿಂದಲೇ ಮೃತಪಟ್ಟಿರುವ ಬಗ್ಗೆ ದಾಖಲೆ ಪಡೆದು ಪರಿಹಾರವನ್ನು ಖಂಡಿತ ಒದಗಿಸಲಾಗುವುದು ಎಂದರು.
[13/03, 4:57 PM] Cm Ps: *ಯಾವುದೇ ಶಕ್ತಿ ಬಂದರೂ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಗದಗ, (ರೋಣ) ಮಾರ್ಚ್ 13:
ಜಗತ್ತಿನ ಯಾವುದೇ ಶಕ್ತಿ ಬಂದರೂ ಜನರಿಗೆ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರೋಣ ತಾಲ್ಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮತ್ತು ರೋಣ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ. ನೆರವೇರಿಸಿ ಮಾತನಾಡಿದರು.
ಗದಗ ಜಿಲ್ಲೆಯ ಮೂರು ಪ್ರಮುಖ ನಗರಗಳಾದ ರೋಣ, ಗಜೇಂದ್ರಗಡ ಹಾಗೂ ನರೇಗಲ್ ಗೆ ಫ್ಲೋರೈಡ್ ಮುಕ್ತ ನೀರಿನ ಸೌಲಭ್ಯ ಕಲ್ಪಿಸಲಾಗಿದೆ
ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯಾಗಿದೆ. ನರೆಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆಯನ್ನು ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು. ಸಂತೋಷದೊಂದಿಗೆ ಕಳವಳವೂ ಆಗಿದೆ ಎಂದ ಮುಖ್ಯಮಂತ್ರಿಗಳು, ಈ ಯೋಜನೆ 2009 ರಲ್ಲಿ ಪ್ರಾರಂಭವಾದರೂ, ಮುಂದುವರೆಯಲಿಲ್ಲ. ಮಲಪ್ರಭ ನದಿ ನೀರನ್ನು ಶುದ್ದೀಕರಿಸಿ ಫ್ಲೋರೈಡ್ ಮುಕ್ತ ನೀರನ್ನು ಸರಬರಾಜು ಮಾಡಲು ಇಂದಿನಿಂದ ಪ್ರಾರಂಭಿಸಲಾಗಿದೆ ಎಂದರು.
*ಡಬಲ್ ಇಂಜಿನ್ ಸರ್ಕಾರದ ಬದ್ಧತೆ*
ಮೂರು ವರ್ಷದ ಹಿಂದೆ ಕೆಂಪುಕೋಟೆಯ ಮೇಲೆ ಪ್ರತಿ ಮನೆಗೆ ಕುಡಿಯುವ ನೀರು ಕೊಡುವುದಾಗಿ ಘೋಷಿಸಿದ್ದರು. ಈ ಮೂರು ವರ್ಷದಲ್ಲಿ ,12 ಕೋಟಿ ಮನೆಗಳಿಗೆ ಹೊಸದಾಗಿ ನೀರು ಕೊಟ್ಡಿದ್ದಾರೆ. ನಮ್ಮ ರಾಜ್ಯದಲ್ಲಿ 72 ವರ್ಷಗಳವರೆಗೂ ಕೇವಲ 7 ಕೋಟಿ ಮನೆಗಳಿಗೆ ನೀರಿನ ಸೌಲಭ್ಯವಿತ್ತು. ಮೂರು ವರ್ಷಗಳಲ್ಲಿ 12 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದವರು ಪ್ರಧಾನಿ ನರೇಂದ್ರ ಮೋದಿ. ರಾಜ್ಯದಲ್ಲಿ ಕೇವಲ 25 ಲಕ್ಷ ಮನೆಗಳಿಗೆ 75 ವರ್ಷಗಳಲ್ಲಿ ನೀರಿನ ಸಂಪರ್ಕ ನೀಡಿದ್ದರು. ನಮ್ಮ ಸರ್ಕಾರ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸಿದೆ.ಇದು ಡಬಲ್ ಇಂಜಿನ್ ಸರ್ಕಾರದ ಬದ್ಧತೆ. ಜಲ್ ಜೀವನ್ ಮಿಷನ್, ಅಮೃತ್ ಯೋಜನೆ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.
*ವಿಳಂಬರಹಿತ ಪ್ರಗತಿ ಸಾಧಿಸುವುದೇ ಸರ್ಕಾರದ ಗುರಿ*
ಜನ ಮೂಲ ಸೌಲಭ್ಯಗಳನ್ನು ನೀಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಜಗತ್ತಿನ ಯಾವುದೇ ಶಕ್ತಿ ಬಂದರು ಜನರಿಗೆ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ. ಜನ ಶಕ್ತಿ ಮುಂದೆ ಯಾವುದೇ ಶಕ್ತಿ ನಡೆಯುವುದಿಲ್ಲ. ಯಾವಾಗಲೂ ಜನರ ಇಚ್ಛಾಶಕ್ತಿ ಗೆದ್ದಿದೆ. ಅಭಿವೃದ್ಧಿ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಸಮಯ ಮತ್ತು ಅಭಿವೃದ್ಧಿ ಎರಡೂ ಒಟ್ಟಿಗೆ ಸಾಗಬೇಕು. ಕಾಲಮಿತಿಯಲ್ಲೇ ಕೆಲಸಗಳು ಆಗಬೇಕು. ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಳಂಬರಹಿತ ಪ್ರಗತಿ ಸಾಧಿಸುವುದೇ ನಮ್ಮ ಸರ್ಕಾರದ ಗುರಿ ಎಂದರು.
*ರಾಜ್ಯದ 3 ಲಕ್ಷ ಕುಟುಂಬಗಳಿಗೆ ಬೆಳಕು ಕಾರ್ಯಕ್ರಮ:*
ಗದಗ ಜಿಲ್ಲೆಯಲ್ಲಿ ವಿದ್ಯುತ್ ಸೌಲಭ್ಯವಿಲ್ಲದ 8092 ಕುಟುಂಬಗಳಿಗೆ ಹಾಗೂ ಇಡೀ ರಾಜ್ಯದಲ್ಲಿ ಸುಮಾರು 3 ಲಕ್ಷ ಕುಟುಂಬಗಳಿಗೆ ಬೆಳಕು ನೀಡುವ ಕಾರ್ಯಕ್ರಮವನ್ನು ಮಾಡಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ 1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು ನೀಡಲಾಗುತ್ತದೆ. ಎರಡನೇ ಹಂತದ ಯೋಜನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನೂ ಸರ್ಕಾರ ಜಾರಿಗೊಳಿಸಿದ್ದು, ಮಹಿಳೆಯರು ಹಾಗೂ ಯುವಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕನ್ನು ಬದುಕಬೇಕೆನ್ನುವುದು ಸರ್ಕಾರದ ಆಶಯ. ಕೃಷಿ ಕಾರ್ಮಿಕ ಮಹಿಳೆಯರಿಗೆ 1000 ರೂ. ಆರ್ಥಿಕ ಸಹಾಯ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.
*2000 ಶಾಲಾ ಬಸ್ ಸೇವೆ :*
ಜನರ ಸಮಸ್ಯೆಗಳನ್ನು ನಿವಾರಿಸುವ ಸ್ಪಂದನಾಶೀಲ ಸರ್ಕಾರ ನಮ್ಮದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಿಮೋಥೆರಪಿ ಕೇಂದ್ರ ಹೆಚ್ಚಿಸಲಾಗಿದೆ.ಕಿವುಡರಿಗೆ ಶ್ರವಣ ಸಾಧನಕ್ಕೆ ಸಹಾಯಕ್ಕೆ 500 ಕೋಟಿ ರೂ. ನಿಗದಿಪಡಿಸಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲೆಗೆ ತೆರಳಲು 2000 ಶಾಲಾ ಬಸ್ ಸೇವೆಯನ್ನು ಪ್ರಾರಂಭಿಸಲಾಗುವುದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಐಟಿಐಯಲ್ಲಿ ಪಿಯುಸಿಯ ಅನುತೀರ್ಣರಾದ ಯುವಕರಿಗೆ ತರಬೇತಿ ಹಾಗೂ 6 ತಿಂಗಳವರೆಗೆ 1500 ರೂ. ಭತ್ಯೆ ನೀಡಿ ಉದ್ಯೋಗವನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದುಡಿಯುವ ವರ್ಗಕ್ಕೆ ಬೆಂಬಲ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ನಾಡನ್ನು ಕಟ್ಟುವುದು ದುಡಿಯುವ ವರ್ಗ ಎಂದರು.
*ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ :*
250 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್ ಗಳ ಸಾಮರ್ಥ್ಯವನ್ನು ಹೆಚ್ಚಿಸಿ, 30 ಸಾವಿರ ಓಬಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ನೇಕಾರರಿಗೆ ವಿದ್ಯುತ್ ಸಬ್ಸಿಡಿ, 2 ಲಕ್ಷದವರೆಗೆ ಸಾಲಸೌಲಭ್ಯ, ಸಹಾಯಧನ, 350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಸಂವಿಧಾನದ 9 ನೇ ಶೆಡ್ಯೂಲ್ ಗೆ ಈ ಹೆಚ್ಚಳವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರದ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿ , ಇನ್ನಷ್ಟು ಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕೆನ್ನುವ ಉದ್ದೇಶದಿಂದ ಫಲಾನುಭವಿಗಳ ಸಮ್ಮೇಳನವನ್ನು ಏರ್ಪಡಿಸಲಾಗುತ್ತಿದೆ ಎಂದರು.
ಸಚಿವರಾದ ಬಿ.ಎ.ಬಸವರಾಜ, ಸಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಳಕಪ್ಪ ಬಂಡಿ, ರೋಣ ಪುರಸಭೆ ಅಧ್ಯಕ್ಷೆ ರಂಗಮ್ಮ ಸುರೇಶ ಭಜಂತ್ರಿ, ಶಾಸಕರಾದ ಸಲೀಂ ಅಹ್ಮದ್, ಎಸ್.ವಿ.ಸಂಕನೂರು, ಮೊದಲಾದವರು ಉಪಸ್ಥಿತರಿದ್ದರು.
[13/03, 6:57 PM] Cm Ps: *ಬೆಂಗಳೂರು,* ಮಾರ್ಚ್ 13: *ಕರ್ನಾಟಕ ಮಾಧ್ಯಮ ಅಕಾಡೆಮಿ* ಹಾಗೂ *ವಾರ್ತಾ* *ಮತ್ತು ಸಾರ್ವಜನಿಕ ಸಂಪರ್ಕ* *ಇಲಾಖೆ ವತಿಯಿಂದ* *2019* ರಿಂದ *2022 ನೇ ಸಾಲಿನ* *ಪ್ರಶಸ್ತಿ* ಪ್ರದಾನ ಹಾಗೂ *ಟಿಎಸ್ಸಾರ್ ಸ್ಮಾರಕ, ಮೊಹರೆ* *ಹಣಮಂತರಾಯ ಪ್ರಶಸ್ತಿ ಪ್ರದಾನ* ಸಮಾರಂಭ
ವನ್ನು *ಮಾನ್ಯ ಮುಖ್ಯಮಂತ್ರಿ* *ಬಸವರಾಜ ಬೊಮ್ಮಾಯಿ* ಉದ್ಘಾಟಿಸಿ *ಪ್ರಶಸ್ತಿ ಗಳನ್ನು* *ಪ್ರದಾನ ಮಾಡಿ ಮಾತನಾಡಿದರು.*
[13/03, 7:39 PM] Cm Ps: *ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ; ನೈಟ್ ವಾಚಮನ್ ಕೂಡ ಹೌದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಪ್ರಶಸ್ತಿ ಸಿಗುವಂತಹದ್ದು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲಿ ಅಂತ ಎನ್ನುವುದು ನನ್ನ ಭಾವನೆ. ನೀವು ಒಳ್ಳೆಯ ಕೆಲಸ ಮಾಡಿದ್ದಕ್ಕೆ ಗುರುತಿಸಿರುತ್ತಾರೆ. ಪ್ರಶಸ್ತಿಯ ಪಾವಿತ್ರ್ಯತೆ ಹೇಗೆ ಇದೆ ಎಂದರೆ, ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಬೇಕು ಅಂತ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು.
ಪತ್ರಿಕೋದ್ಯಮ ಬಹಳ ಹೆಳೆಯ ವೃತ್ತಿ. ವಿಶ್ವದ ನಾಗರಿಕತೆಯ ಬೆಳವಣಿಗೆಯಲ್ಲಿ ಬಹಳ ದೊಡ್ಡ ಪಾತ್ರವಿದೆ. ತಂತ್ರಜ್ಞಾನ ಹೆಚ್ಚಾದಂತೆ ಪತ್ರಿಕೋದ್ಯಮದಲ್ಲಿ ದೊಡ್ಡ ಬದಲಾವಣೆಯಾಗಿದೆ. ಅದರಲ್ಲೂ ವಿಶ್ವಯುದ್ಧ 1 ಮತ್ತು 2 ರ ಬಳಿಕ ಮಷೀನ್ ಮ್ಯಾನುಫ್ಯಾಕ್ಚುರಿಂಗ್ ಮತ್ತು ಪತ್ರಿಕೋದ್ಯಮದಲ್ಲಿ ಬಹಳ ಬದಲಾವಣೆ ಆಗಿದೆ. ವರ್ಡ್ ಆರ್ಡರ್ ಕೂಡ ಬದಲಾವಣೆ ಆಗಿದೆ. ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮ ಹಾಗೂ ಸ್ವಾತಂತ್ರ್ಯ ನಂತರದ ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾರತದ ಪತ್ರಿಕೋದ್ಯಮ ಪಾತ್ರ ಮುಖ್ಯವಾಗಿದೆ. ಅದೊಂದು ಸುವರ್ಣಯುಗ ಎಂದರು.
ಪ್ರಜಾಪ್ರಭುತ್ವ ಇರಬೇಕಾಗಿರುವುದು ನ್ಯಾಯಾಂಗ, ಶಾಸಕಾಂಗ ಮತ್ತು ಪತ್ರಿಕೋದ್ಯಮದಲ್ಲಿ. ಕಾಲ ಕಾಲಕ್ಕೆ ಪರಿಣಾಮಕಾರಿ ಕಾನೂನು ಮಾಡಿ ಅದಕ್ಕೆ ತಕ್ಕ ಹಾಗೆ ನ್ಯಾಯಾಂಗ ಕಾರ್ಯವನ್ನು ಮಾಡಿದೆ. ಕಾನೂನಿನ ಹೊರತಾಗಿ ಸ್ವತಂತ್ರವಾಗಿ ಕೆಲಸ ಮಾಡಿದ್ದು ಪತ್ರಿಕೋದ್ಯಮ. ಇಲ್ಲಿ ಪ್ರಶಸ್ತಿ ಪಡೆದ ಬಹುತೇಕರು ಮೂವತ್ತು ವರ್ಷದಿಂದ ಪರಿಚಯ. ಅವರು ಎಷ್ಟೊಂದು ಕಷ್ಟ ಪಟ್ಟು ಸುದ್ದಿ ಸಂಗ್ರಹಿಸುತ್ತಿದ್ದರು ಎನ್ನುವುದು ನನಗೆ ಅರಿವಿದೆ ಎಂದರು.
ಧಾರವಾಡ, ರಾಯಚೂರು, ಮೈಸೂರಿನಲ್ಲಿ ಕೆಲಸ ಮಾಡುವ ಪತ್ರಕರ್ತರು ಎಷ್ಟು ಕೆಲಸ ಮಾಡುತ್ತಾರೆ ಎನ್ನುವುದು ನನಗೆ ಗೊತ್ತು. ವಿಜಯ ಸಂಕೇಶ್ವರ ಅವರ ಹೊಸ ಪ್ರಯತ್ನ, ಜನರ ಧ್ವನಿಯಾಗಿ ಕೆಲಸ ಮಾಡುವ ರಂಗಣ್ಣ. ಮಾಧ್ಯಮ ಅಕಾಡೆಮಿ ಕೇವಲ ಪ್ರಶಸ್ತಿ ಕೊಡುವ ಕೆಲಸ ಮಾಡದೇ, ಸಂಶೋದನೆ, ಹೊಸ ಪತ್ರಕರ್ತರಿಗೆ ಪ್ರೋತ್ಸಾಹ, ತಾಲ್ಲೂಕು, ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದರು.
ಪತ್ರಿಕೋದ್ಯಮ ಹಾಗೂ ರಾಜಕಾರಣಿಗಳ ಸಂಬಂಧ ಅವಿನಾಭಾವ ಸಂಬಂಧ. ರಾಜಕೀಯ ಇಲ್ಲದೆ ಪತ್ರಿಕೆಗಳು ನಡೆಯುವುದಿಲ್ಲ. ಪತ್ರಿಕೆಗಳಿಲ್ಲದೇ ರಾಜಕಾರಣಿಗಳಿಲ್ಲ.
ಪತ್ರಿಕೆಗಳು ಸಕಾರಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡಿ, ಜನರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ ಹಾಗೂ ಉದ್ಯಮಿ ವಿಜಯ ಸಂಕೇಶ್ವರ್, ಡಾ. ಸುಧಾಮೂರ್ತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರಿದ್ದರು.
Post a Comment