[13/03, 11:51 AM] Kpcc official: ಬೆಂಗಳೂರಿನ ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮನೋಹರ್, ಪುಟ್ಟರಾಜು, ಭವ್ಯ ನರಸಿಂಹಮೂರ್ತಿ, ರಘುವೀರ್ ಗೌಡ ಮತ್ತಿತರರು ಇದ್ದರು.
[13/03, 11:52 AM] Kpcc official: #40PercentSarkara ದ ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರರ ಆತ್ಮಹತ್ಯೆಯ ನಂತರ ಸಹಕಾರಿ ಬ್ಯಾಂಕ್ ಮ್ಯಾನೇಜರ್ ಸರದಿ.
ಉಡುಪಿಯ ಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷನಾಗಿರುವ ಯಶ್‌ಪಾಲ್ ಸುವರ್ಣನನ್ನು ಹೆಸರಿಸಿ ಅದೇ ಬ್ಯಾಂಕಿನ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಸಂಗತಿ ಬೆಳಕಿಗೆ ಬಂದಿದೆ, ಸರ್ಕಾರ ಮಾತ್ರ ರಕ್ಷಣೆಗೆ ನಿಂತಿದೆ.
[13/03, 11:52 AM] Kpcc official: ಉಡುಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕಿನ ಮ್ಯಾನೇಜರ್ ಡೆತ್ ನೋಟ್‌ನಲ್ಲಿ ಯಶಪಾಲ್ ಸುವರ್ಣನ ವಿರುದ್ದ ನೇರವಾಗಿ ಕಿರುಕುಳದ ಆರೋಪ ಮಾಡಿದ್ದರೂ ಆತನನ್ನು ಬಂಧಿಸಿಲ್ಲವೇಕೆ?
ಕಾನೂನನ್ನು ಕಡಲೇಬೀಜ ಮಾಡಿಕೊಂಡ @JnanendraAraga ಅವರೇ, ಕೊಲೆಗಡುಕರ ರಕ್ಷಣೆಯೇ ಗೃಹಸಚಿವರಾಗಿ ನಿಮ್ಮ ಹೊಣೆಯೇ?
ಬಿಜೆಪಿಗರ ವಿರುದ್ಧ ಕಾನೂನು ಕೈ ಕಟ್ಟಿ ನಿಲ್ಲುವುದೇಕೆ?
[13/03, 12:02 PM] Kpcc official: *ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ರಮೇಶ್ ಜಾರಕಿಹೊಳಿಗೆ ಡಿ.ಕೆ. ಶಿವಕುಮಾರ್ ತಿರುಗೇಟು*
*ಬೆಂಗಳೂರು:*
‘ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ’ ಎಂದು ತಿರುಗೇಟು ನೀಡಿದರು.
ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ‘ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ’ ಎಂದರು.
ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ. ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ’ ಎಂದು ತಿಳಿಸಿದರು.
ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂದು ಕೇಳಿದಾಗ, ‘ಮಾ.16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ’ ಎಂದು ತಿಳಿಸಿದರು.
ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಲಿ, ಲಂಚಕೋರರನ್ನಾದರೂ ಇಟ್ಟುಕೊಳ್ಳಲಿ. ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ’ ಎಂದು ಕೇಳಿದರು.
ರಾಜಾಜಿನಗರದ ಆಕಾಂಕ್ಷಿಗಳು ತಮ್ಮನ್ನು ಭೇಟಿ ಮಾಡಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬ ಬೇಡಿಕೆ ಇಟ್ಟಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ಪಕ್ಷ ತೀರ್ಮಾನ ಮಾಡಲಿದೆ. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ’ ಎಂದರು.
ಮಂಡ್ಯವನ್ನು ರಾಷ್ಟ್ರದಲ್ಲಿ ಮಾದರಿ ಜಿಲ್ಲೆ ಮಾಡುವುದಾಗಿ ಪ್ರಧಾನಿ ಹೇಳಿದ್ದಾರಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಮಂಡ್ಯದಲ್ಲಿ ಮೋದಿ ಅವರು ಯಾರ ಬಗ್ಗೆ ಮಾತನಾಡಿದ್ದಾರೆ, ಯಾರ ಬಗ್ಗೆ ಮಾತನಾಡಿಲ್ಲ ಎಂದು ನಾನು ಹೇಳಬೇಕಾಗಿಲ್ಲ, ಮಾಧ್ಯಮಗಳು ವರದಿ ಮಾಡಿವೆ. ಜನರಿಗೆ ಅದು ತಿಳಿದಿದೆ’ ಎಂದು ತಿಳಿಸಿದರು.
ಕೆಪಿಟಿಸಿಎಲ್ ನೌಕರರು ವಿದ್ಯುತ್ ಕಡಿತ ಮಾಡಿ ಕೆಲಸಕ್ಕೆ ಗೈರಾಗಿ ವೇತನ ಪರಿಷ್ಕರಣೆಗೆ ಒತ್ತಾಯಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.
[13/03, 1:14 PM] Kpcc official: https://twitter.com/rssurjewala/status/1635180641162792961?s=46&t=mrixJCdjvxpJS4D9AkpndA
ಭ್ರಷ್ಟಾಚಾರವನ್ನೆ ಉಸಿರಾಗಿಸಿಕೊಂಡಿರುವ #40PercentSarkara ದಲ್ಲಿ ಭ್ರಷ್ಟರಿಗೆ ರಾಜಮರ್ಯಾದೆ!
ಕಳ್ಳರ ಬೆಂಬಲ ಕಳ್ಳರಿಗಷ್ಟೆ ಅಲ್ವೇ @BSBommai ?
ಪ್ರಧಾನಿಯೇ ರೌಡಿಗೆ ಕೈಮುಗಿಯುವಾಗ ಇವರು ಭ್ರಷ್ಟರಿಗೆ ಬಡ್ತಿ ನೀಡದೆ ಇರುತ್ತಾರ?
ಭ್ರಷ್ಟರಿಂದ,ಭ್ರಷ್ಟರಿಗಾಗಿ,ಭ್ರಷ್ಟರಿಗೋಸ್ಕರ #ಭ್ರಷ್ಟೋತ್ಸವ ನಡೆಸುತ್ತಿರುವ ಭ್ರಷ್ಟ ಜನತಾ ಪಾರ್ಟಿ!
[13/03, 1:31 PM] Kpcc official: ಎಲ್ಲೇ ಹೋದರೂ ಬಿಜೆಪಿಗೆ ಖಾಲಿ ಕುರ್ಚಿಗಳೇ ಸ್ವಾಗತಿಸುತ್ತವೆ!
ಖಾಲಿ ಕುರ್ಚಿಗಳು ಬಿಜೆಪಿ ನಿರ್ನಾಮದ ಕತೆ ಹೇಳುತ್ತವೆ.
ಹಣ ನೀಡಿದರೂ, ಏನೇ ಸರ್ಕಸ್ ಮಾಡಿದರೂ ಬಿಜೆಪಿಯತ್ತ ಜನ ಸುಳಿಯದಿರುವುದು ಮಡುಗಟ್ಟಿದ ಜನಾಕ್ರೋಶಕ್ಕೆ ನಿದರ್ಶನ.
ಖಾಲಿ ಕುರ್ಚಿ ಕಂಡು ಯಾತ್ರೆ ಮೊಟಕುಗೊಳಿಸುವುದಕ್ಕಿಂತ ನಾಚಿಕೆಗೇಡು ಇನ್ನೇನಿದೆ @BJP4Karnataka?
[13/03, 1:43 PM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಚಲುವರಾಯಸ್ವಾಮಿ ಅವರು ನಾಗಮಂಗಲದ ಕಾಚೇನಹಳ್ಳಿಯಲ್ಲಿ ಗೃಹಿಣಿಯರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ಸೋಮವಾರ ವಿತರಿಸಿದರು.
[13/03, 3:49 PM] Kpcc official: ನಾಗಮಂಗಲ ಪ್ರಜಾಧ್ವನಿ ಸಮಾವೇಶದಲ್ಲಿ ಮನ್ಮೂಲ್ ಮಾಜಿ ಅಧ್ಯಕ್ಷ ಜವರೇಗೌಡ ಹಾಗೂ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಬೆಟ್ಟೇಗೌಡರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
[13/03, 3:50 PM] Kpcc official: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಸೋಮವಾರ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಎಂಎಲ್ಸಿಗಳಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಾಜಿ ಶಾಸಕರಾದ ಕೆ ಬಿ ಚಂದ್ರಶೇಖರ್, ರಮೇಶ್ ಬಂಡಿಸಿದ್ದೇಗೌಡ, ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ಡಿಸಿಸಿ ಅಧ್ಯಕ್ಷ ಗಂಗಾಧರ್ ಮತ್ತಿತರರು ಭಾಗವಹಿಸಿದ್ದರು.
[13/03, 3:50 PM] Kpcc official: ವಯಸ್ಸಿನ ಕಾರಣ ನೀಡಿ 'ಸಿಎಂ' ಹುದ್ದೆಯಿಂದ ಕೆಳಗಿಳಿಸಿದ್ದಾಯ್ತು
ನಿವೃತ್ತಿಯ ನಂತರವೂ ಪಕ್ಷ ಅಧಿಕಾರಕ್ಕೆ ತರಲು 'ಟಾರ್ಗೆಟ್' ಕೊಟ್ಟಿದ್ದಾಯ್ತು
ಈಗ ಮಗನಿಗೆ ಟಿಕೆಟ್ ವಿಚಾರದಲ್ಲಿ 'ಸಿಟಿ ರವಿ'ಯಂತ ಎಳಸುಗಳ ಮಾತು ಕೇಳಬೇಕಾಯ್ತು.
ಯಡಿಯೂರಪ್ಪನವರೇ, ಬಿಜೆಪಿಯಲ್ಲಿ ನಿಮ್ಮ ಸ್ಥಿತಿ ಇಷ್ಟು ಹೀನಾಯವಾಯ್ತಲ್ಲ
@BSYBJP
#BJPvsBJP
#BSYvsBJP
[13/03, 4:45 PM] Kpcc official: '@BSYBJP ಅವರೇ, ಸಿಟಿ ರವಿ ನಿಮ್ಮ ಅಸ್ತಿತ್ವಕ್ಕೆ ಸವಾಲು ಹಾಕುವಂತಹ ಸ್ಥಿತಿಗೆ ಬರಬಾರದಿತ್ತು.
ಬಿಜೆಪಿಯಲ್ಲಿ ಶೆಟ್ಟರ್, ನಿರಾಣಿ, ಜೊಲ್ಲೆ, ಕತ್ತಿ ಫ್ಯಾಮಿಲಿಗಳು ಹಾಗೂ ತೇಜಸ್ವಿ ಸೂರ್ಯನ ಫ್ಯಾಮಿಲಿಗೆ ಇರುವ ಮುಕ್ತ ಅವಕಾಶ @BSYBJP ಫ್ಯಾಮಿಲಿಗೆ ಇಲ್ಲದಾಯ್ತೆ!?
BSYಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಲಾಗದ ಸ್ಥಿತಿ ಬಂದಿದ್ದು ದುರಂತವಲ್ಲವೇ!
[13/03, 5:02 PM] Kpcc official: *ನಾಗಮಂಗಲದ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು*
ನಾನಿಂದು ಇಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದೇನೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ನಾವು ಮಾತು ಕೊಡುವುದಕ್ಕಿಂತ ಕೊಟ್ಟ ಮಾತಿನಂತೆ ನಡೆಯುವುದು ಮುಖ್ಯ. ಆ ಮೂಲಕ ಪ್ರಜಾಪ್ರಭುತ್ವದಲ್ಲಿ ಜನರ ವಿಶ್ವಾಸ ಗಳಿಸಿ ಕೆಲಸ ಮಾಡಬೇಕು.
ಜಿ.ಸಿ ಚಂದ್ರಶೇಖರ್ ಅವರು ಮಾತನಾಡುತ್ತಾ, ನೀವು ಹತ್ತಾರು ಸುರೇಶ್ ಗೌಡರನ್ನು ತಯಾರು ಮಾಡಬಹುದು, ಆದರೆ ಮತ್ತೊಬ್ಬ ಚಲುವರಾಯಸ್ವಾಮಿ ತಯಾರು ಮಾಡಲು ಸಾಧ್ಯವಿಲ್ಲ ಎಂದು ಒಂದೇ ಮಾತಿನಲ್ಲಿ ಚೆಲುವರಾಯಸ್ವಾಮಿ ಅವರ ಸಾಮರ್ಥ್ಯವನ್ನು ಬಣ್ಣಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ 10 ಶಾಸಕರು ಜೆಡಿಎಸ್ ನಿಂದ ಗೆದ್ದಿದ್ದರು. ಆ ಪೈಕಿ ನಾಲ್ಕು ಜನ ಬಿಟ್ಟು ಉಳಿದ ಆರು ಮಂದಿ ಕಾಂಗ್ರೆಸ್ ಸೇರಿದರು. ಆಗ ಜೆಡಿಎಸ್ ಗೆ ದ್ರೋಹ ಬಗೆಯಬಾರದು ಎಂದು ಚಲುವರಾಯಸ್ವಾಮಿ ಜೆಡಿಎಸ್ ನಲ್ಲೇ ಉಳಿದರು. ಧರಂಸಿಂಗ್ ಅವರ ಕಾಲದಲ್ಲಿ ಚೆಲುವರಾಯಸ್ವಾಮಿ ಮಂತ್ರಿಯಾಗಿದ್ದರು. ಆಗ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲೇಬೇಕು ಎಂದು ಪಣತೊಟ್ಟು ಬಿಜೆಪಿ ಜತೆ ಕೈಜೋಡಿಸಿದರು. ಆಗ ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಮಾರಸ್ವಾಮಿ ಅವರು ತಮ್ಮ ಭಾಷಣದಲ್ಲಿ ನಾನು ಮುಖ್ಯಮಂತ್ರಿಯಾಗಲು ಚಲುವರಾಯಸ್ವಾಮಿ, ಬಾಲಕೃಷ್ಣ, ಪುಟ್ಟಣ್ಣ ಕಾರಣ ಎಂದಿದ್ದರು.
ಚಲುವರಾಯಸ್ವಾಮಿ ಅವರು ತಮಗೆ ಅಕಾಶ ಸಿಕ್ಕಾಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಅವಕಾಶದಲ್ಲಿ ನಾವು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ನಾನು ದೇವೇಗೌಡರ ಕುಟುಂಬದ ವಿರುದ್ಧ ರಾಜಕೀಯವಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದರೂ ಪಕ್ಷ ಹೇಳಿದ ಕಾರಣಕ್ಕೆ ಎಲ್ಲ ರಾಜಕೀಯ ಭಿನ್ನಾಭಿಪ್ರಾಯ ಮರೆತು ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಅವರಿಗೆ ಬೆನ್ನೆಲುಬಾಗಿ ನಿಂತೆ. ಮೈತ್ರಿ ಸರ್ಕಾರ ಇದ್ದಷ್ಟು ದಿನ ನಮ್ಮ ಪ್ರಾಮಾಣಿಕತೆಯಲ್ಲಿ ಕಿಂಚಿತ್ತೂ ಲೋಪ ಬಾರದಂತೆ ನಡೆದುಕೊಂಡಿದ್ದೇವೆ. ಇನ್ನು ದೇವೇಗೌಡರನ್ನು ದೇಶದ ಪ್ರಧಾನಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದೆಲ್ಲವೂ ಈಗ ಇತಿಹಾಸ. ಇತಿಹಾಸ ಮರೆತರೆ ಯಾರೂ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ.
ಇನ್ನು ಸಿದ್ದರಾಮಯ್ಯ ಅವರ ಕಾಲದಲ್ಲಿ ಕುಮಾರಸ್ವಾಮಿ ಅವರು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದಾಗ ನಾನು ಒಂದು ಮಾತು ಹೇಳಿದ್ದೆ. ಬಿಜೆಪಿ 40, ನೀವು 40 ಗೆದ್ದಿದ್ದು, ಸಿದ್ದರಾಮಯ್ಯ ಅವರ ಸರ್ಕಾರದ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಿದ್ದೀರಿ. ನಿಮ್ಮ ಶಾಸಕರಿಗೆ ಸಿದ್ದರಾಮಯ್ಯ ಅವರ ಸರ್ಕಾರ ಬೀಳಿಸಲು ಇಚ್ಛೆ ಇಲ್ಲ. ಆದರೆ ನೀವು ಮಾತ್ರ ಪ್ರಯತ್ನಿಸುತ್ತಿದ್ದೀರಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಇದ್ದ 16 ಸಂಸದರ ಪೈಕಿ ಯಾರೋಬ್ಬರೂ ನಿಮ್ಮ ಜತೆ ಉಳಿದಿಲ್ಲ. ಅದು ಯಾಕೆ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದೆ.
ಅವರು ಮಾತೆತ್ತಿದರೆ ನಾನು ರೈತನ ಮಗ ಎಂದು ಕಣ್ಣೀರು ಹಾಕುವುದನ್ನು ನೋಡಿದ್ದೇವೆ. ಕಣ್ಣೀರು ಬರುವುದು ಸಹಜ. ನಕ್ಕರೂ ಕಣ್ಣಲ್ಲಿ ನೀರು ಬರುತ್ತದೆ. ಅತ್ತರೂ ಕಣ್ಣಲ್ಲಿ ನೀರು ಬರುತ್ತದೆ. ಭಗವಂತ ನಿಮಗೆ ವರ ಅಥವಾ ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಈ ಅವಕಾಶ ಸಿಕ್ಕಾಗ ನಾವು ಜನರಿಗೆ ಏನು ಮಾಡುತ್ತೇವೆ ಎಂಬುದು ಮುಖ್ಯ. ಈ ಜಿಲ್ಲೆಯಲ್ಲಿ 7 ಕ್ಕೆ 7 ಜೆಡಿಎಸ್ ಗೆದ್ದಿತ್ತು. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆದ ನಂತರ ನಿಮ್ಮ ಜಿಲ್ಲೆ ಜನರ ಜೀವನದಲ್ಲಿ, ನಿಮ್ಮ ತಾಲೂಕಿನಲ್ಲಿ ಯಾವುದಾದರೂ ಬದಲಾವಣೆ ತಂದಿದ್ದಾರಾ? ಈ ಜಿಲ್ಲೆಯ ಸಕ್ಕರೆ ಕಾರ್ಖಾನೆ, ನೀರಾವರಿ ವಿಚಾರ, ಸರ್ವತೋಮುಖ ಅಭಿವೃದ್ಧಿಗೆ ಏನಾದರೂ ಕೊಡುಗೆ ನೀಡಿದ್ದಾರಾ? ಇಲ್ಲ.
ನೀವು ಕುಮಾರಸ್ವಾಮಿ ಅವರನ್ನು 2 ಬಾರಿ ಸಿಎಂ ಮಾಡಿದ್ದೀರಿ, ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದೀರಿ. ನಾನು ನಿಮ್ಮ ಮನೆ ಮಗನಾಗಿದ್ದು, ನನಗೂ ಒಂದು ಅವಕಾಶ ಮಾಡಿಕೊಡಿ. ನಾನು ಈ ಜಿಲ್ಲೆಯಲ್ಲಿ ಹುಟ್ಟಿಲ್ಲ, ಆದರೆ ನನ್ನ ಮಾವನವರು ಈ ತಾಲೂಕಿನವರು. ಈ ಕ್ಷೇತ್ರದಲ್ಲಿ ಕೇವಲ ಚಲುವರಾಯಸ್ವಾಮಿ ಮಾತ್ರವಲ್ಲ ಡಿ.ಕೆ. ಶಿವಕುಮಾರ್ ಅಭ್ಯರ್ಥಿ ಎಂದು ತಿಳಿದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ.
ರೈತ ಕೊಡುವ ಅನ್ನ, ಗುರು ಕಲಿಸುವ ಅಕ್ಷರ, ತಾಯಿಯ ಆಶೀರ್ವಾದ, ಮತದಾರರ ಪ್ರೀತಿಯನ್ನು ಮರೆಯಬಾರದು. ನೀವೆಲ್ಲರೂ ಚಲುವರಾಯಸ್ವಾಮಿ ಅವರ ಪರವಾಗಿ ನಿಲ್ಲಲು ಇಲ್ಲಿಗೆ ಬಂದಿದ್ದೀರಿ. ನಾವು ನಿಮ್ಮ ಈ ಋಣ ತೀರಿಸುತ್ತೇವೆ. ನಿಮ್ಮ ಸ್ವಾಭಿಮಾನಕ್ಕೆ, ಆತ್ಮಗೌರವಕ್ಕೆ ಧಕ್ಕೆ ಬಾರದಂತೆ ನಾವು ಕೆಲಸ ಮಾಡುತ್ತೇವೆ. ಚಲುವರಾಯಸ್ವಾಮಿ ಅವರನ್ನು ನಾನು ನಾಗಮಂಗಲಕ್ಕೆ ಮಾತ್ರ ಸೀಮಿತ ಮಾಡಿಲ್ಲ. ಪಕ್ಷದ ಉಪಾಧ್ಯಕ್ಷರಾಗಿ ಅವರು ಈ ಭಾಗದ ಬೇರೆ ಜಿಲ್ಲೆಗಳಲ್ಲೂ ಸಂಘಟನೆ ಮಾಡಿಕೊಂಡು ಬರುತ್ತಿದ್ದಾರೆ.
ನಾವು ಈ ಭಾಗದ ಧೀಮಂತ ನಾಯಕ ಧ್ರುವನಾರಾಯಣ್ ಅವರನ್ನು ಕಳೆದುಕೊಂಡು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಂದಿನ ಯಾತ್ರೆಗೆ ನಾನು ಬಹಳ ಭಾರವಾದ ಮನಸ್ಸಿನಿಂದ ಬಂದಿದ್ದೇನೆ. ನನ್ನ ಸಹೋದರನಂತೆ, ಪಕ್ಷದ ಸಂಘಟನೆಯಲ್ಲಿ ನನಗೆ ಶಕ್ತಿಯಾಗಿದ್ದ ಧ್ರುವನಾರಾಯಣ ಅವರನ್ನು ಕಳೆದುಕೊಂಡ ಶೋಕದಲ್ಲಿ ಈ ಯಾತ್ರೆ ಮಾಡಬೇಕಾಗಿದೆ. ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ಜನಪರ ಕಾಳಜಿ, ಅವಿರತ ಶ್ರಮ ನಮಗೆ ಸ್ಫೂರ್ತಿಯಾಗಲಿದೆ. ಅವರು ಈ ತಾಲೂಕಿನ ಅಳಿಯ ಕೂಡ ಆಗಿದ್ದಾರೆ. ಪಾದರಸದಂತೆ ಕೆಲಸ ಮಾಡುತ್ತಿದ್ದ ಅವರು ಶಾಸಕರಾಗಿ, ಸಂಸದರಾಗಿ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಮಾನವೀಯ ಮೌಲ್ಯಗಳೊಂದಿಗೆ ಎಲ್ಲ ವರ್ಗದವರನ್ನು ಒಟ್ಟಾಗಿ ಕೊಂಡೊಯ್ಯುತ್ತಿದ್ದ ನಾಯಕ ಧೃವನಾರಾಯಣ ಅವರು.
ಕುಮಾರಸ್ವಾಮಿ ಅವರು ನಾವು ಕೊಟ್ಟ ಬೆಂಬಲ ಉಳಿಸಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಬಂದಿದೆ. ಇದಕ್ಕೆ ಕಾರಣ ಯಾರು ಎಂದು ಆಲೋಚಿಸಿ. ನಿನ್ನೆ ಮೋದಿ ಅವರು ಮಂಡ್ಯಕ್ಕೆ ಬಂದಿದ್ದರು. ಅವರು ಕೇವಲ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆಯೇ ಹೊರತು ಜೆಡಿಎಸ್ ಬಗ್ಗೆ ಒಂದೂ ಮಾತನಾಡಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ವೈರಿಯೇ ಹೊರತು ಜೆಡಿಎಸ್ ಅಲ್ಲ. ಈ ವಿಚಾರವನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು.
ಪ್ರಜೆಗಳ ಕಷ್ಟ ಆಲಿಸಿ ಅವುಗಳಿಗೆ ಪರಿಹಾರ ನೀಡಲು ನಾವು ಈ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾವು ಈ ಯಾತ್ರೆಗೆ ಬರುವ ಮುನ್ನ ಕಾಚೇನಹಳ್ಳಿಯ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕಾರ್ಡ್ ನೀಡಿದೆವು. ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಮೂಲಕ ಪ್ರತಿ ಮನೆಗೆ 200 ಯೂನಿಟಿ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನೀವುಗಳು ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಆಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯವಾಗಲಿದೆ. ಇನ್ನು ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ನೀಡಲಾಗುವುದು. ಈ ಎರಡು ಯೋಜನೆಗಳ ಮೂಲಕ ವರ್ಷಕ್ಕೆ 42 ಸಾವಿರದಂತೆ ಐದು ವರ್ಷಕ್ಕೆ 2.10 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಇನ್ನು ಮೂರನೇ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು.
ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡಿದ್ದೇವೆ. ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕುಮಾರಸ್ವಾಮಿ ಅವರು ಸ್ತ್ರೀಶಕ್ತಿ ಸಂಘದ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು, ಆದರೆ ಚನ್ನಪಟ್ಟಣದಲ್ಲಿ ನಾನು ಯಾವುದೇ ಮಾತು ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ. ಕುಮಾರಣ್ಣ ನೀವು ಸಾಲ ಮಾಡದಿದ್ದರೂ ಪರವಾಗಿಲ್ಲ, ಆದರೆ ಸುಳ್ಳು ಹೇಳಬೇಡಿ.
ಈ ಜಿಲ್ಲೆಯಲ್ಲಿ 7ಕ್ಕೆ 7 ಜೆಡಿಎಸ್ ಶಾಸಕರಿದ್ದಾಗ, ನಾವು ಅವರಿಗೆ ಬೆಂಬಲವಾಗಿ ನಿಂತಿದ್ದಾಗ ಜನ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲಿಲ್ಲ. ಶಿವಲಿಂಗೇಗೌಡರು, ವಾಸು, ಶ್ರೀನಿವಾಸ ಗೌಡ, ಮಂಜುನಾಥ ಗೌಡ, ವೈಎಸ್ ವಿ ದತ್ತಾ ಸೇರಿದಂತೆ ಅನೇಕರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯ, ಮೈಸೂರು, ಹಾಸನ ಭಾಗದಲ್ಲಿ ದಳದ ಶಾಸಕರಿದ್ದರೂ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮಧು ಮಾದೇಗೌಡರು, ದಿನೇಶ್ ಗೂಳಿಗೌಡರನ್ನು ಜನ ಆರಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಆರಂಭವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ನೀವು ಕೂಡ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತೇನೆ.
[13/03, 6:44 PM] Kpcc official: ₹300 ಕೊಡುತ್ತೇವೆಂದು ಮೋದಿ ಕಾರ್ಯಕ್ರಮಕ್ಕೆ ಜನರಿಗೆ ಆಮಿಷ ತೋರಿಸಿ ಕರೆತಂದು ಮೊಸಗೊಳಿಸಿದೆ "ಮೊಸಗಾರ ಬಿಜೆಪಿ".
300 ರೂಪಾಯಿಯಲ್ಲಿ 40% ಕಮಿಷನ್ ಕಡಿತಗೊಳಿಸಿಯಾದರೂ ಕೊಡಬಹುದಿತ್ತು, ಆದರೆ 100% ವಂಚನೆ ಮಾಡಿದ್ದು ಸರಿಯೇ @BJP4Karnataka?
300ರೂ.ಗಳ ಭರವಸೆಯಲ್ಲೇ ಮೋಸ ಮಾಡುವವರು "ಬಿಜೆಪಿಯೇ ಭರವಸೆ" ಎಂಬ ಬೋರ್ಡ್ ಹಾಕುವುದು ಪರಮಹಾಸ್ಯ!
[13/03, 6:48 PM] Kpcc official: ಭ್ರಷ್ಟಾಚಾರ, ವೈಫಲ್ಯ, ಬೆಲೆ ಏರಿಕೆಯ ಮೂಟೆ ಹೊತ್ತ @BJP4Karnataka ನಾಯಕರಿಗೆ ಹೋದಲ್ಲೆಲ್ಲ ಜನತೆ ಮಹಾಮಂಗಳಾರತಿ ಎತ್ತುತ್ತಿದ್ದಾರೆ!
ಹಣ ಕೊಟ್ಟು ಜನರನ್ನು ಕರೆಸಿ, ಅದೇ ಜನರಿಂದ ಉಗಿಸಿಕೊಳ್ಳುತ್ತಿರುವ ಬಿಜೆಪಿ ಸ್ಥಿತಿ ನಿಜಕ್ಕೂ ಹೀನಾಯ!
ಗ್ಯಾಸ್ ಬೆಲೆ ಏರಿಕೆಯ ವಿರುದ್ಧ ಮಹಿಳೆಯರ ಆಕ್ರೋಶಕ್ಕೆ @nalinkateel ಉತ್ತರ ಹೇಳದೆ ಓಡಿದ್ದಾರೆ!
Post a Comment