ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ: ಬಿ.ಎಸ್.ಯಡಿಯೂರಪ್ಪ



ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ. ಆ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಚಿಕ್ಕೋಡಿಯ ಬಳಿ ಅಂಕಲಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ಪಕ್ಷ ಮತ್ತು ನಾಯಕರಾದ ನರೇಂದ್ರ ಮೋದಿಜಿ ಅವರಿಗೆ ಗೌರವ ಸಮರ್ಪಿಸುವ ದೃಷ್ಟಿಯಿಂದ ಬಿಜೆಪಿಯನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ರಾಜ್ಯದಲ್ಲಿ ಕನಿಷ್ಠ 140 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಯಾತ್ರೆಯಲ್ಲಿ ಉತ್ಸಾಹದಿಂದ ಜನರು ಸೇರುತ್ತಿದ್ದಾರೆ. ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ ಜೀ ಮತ್ತಿತರ ನಾಯಕರ ಭೇಟಿಯು ಬಿಜೆಪಿ ಬಲವನ್ನು ಹೆಚ್ಚಿಸಿದೆ ಎಂದು ತಿಳಿಸಿದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿ, ಬಿಜೆಪಿ ಸರಕಾರಗಳು ಕಿಸಾನ್ ಸಮ್ಮಾನ್ ಯೋಜನೆ, ಜನೌಷಧಿ ಮತ್ತಿತರ ಹಲವು ಯೋಜನೆಗಳನ್ನು ಜನಹಿತಕ್ಕಾಗಿ ಜಾರಿಗೊಳಿಸಿವೆ. ರಾಜ್ಯದಲ್ಲೂ ವಿದ್ಯಾನಿಧಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ಸಿಗರು ಸುಳ್ಳಿನ ಸರದಾರರು ಎಂದು ಟೀಕಿಸಿದ ಅವರು, ಡಾ. ಅಂಬೇಡ್ಕರರಿಗೆ ಜೀವಂತ ಇದ್ದಾಗ ಮತ್ತು ಸತ್ತ ಬಳಿಕವೂ ಕಾಂಗ್ರೆಸ್ ಅವಮಾನ ಮಾಡಿತ್ತು. ಆದರೆ, ಬಿಜೆಪಿ, ಬಾಬಾ ಸಾಹೇಬರಿಗೆ ಗೌರವ ನೀಡಲು ಪಂಚತೀರ್ಥಗಳನ್ನು ಅಭಿವೃದ್ಧಿ ಪಡಿಸಿದೆ. ರಾಜ್ಯದಲ್ಲೂ ಅವರು ಭೇಟಿ ಕೊಟ್ಟ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಿದೆ ಎಂದು ತಿಳಿಸಿದರು. ಮೀಸಲಾತಿ ವಿಚಾರದಲ್ಲೂ ಕಾಂಗ್ರೆಸ್ ಸುಳ್ಳು ಹೇಳುತ್ತ ಬಂದಿದೆ. ಆದರೆ, ನಾನು ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಸರಕಾರಗಳ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಿ ಬಿಜೆಪಿ ಸರಕಾರ ಮತ್ತೊಮ್ಮೆ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಬಳಿಕ ವಿವಿಧೆಡೆ ರೋಡ್ ಷೋ ನಡೆಯಿತು.
ಕೇಂದ್ರದಲ್ಲಿ ಮೋದಿಯವರ ಸಾಧನೆಯ ಹಾದಿಯಲ್ಲಿ ರಾಜ್ಯದ ಸಾಧನೆ ನೊಡಿದ ಜನತೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ರಾಜ್ಯದ ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
 ಚಿಕ್ಕೋಡಿ ಜಿಲ್ಲೆಯ ಅಂಕಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋಟ್ಯಾಂತರ ರೂಪಾಯಿ ಅನುದಾನ ನೀಡುವ ಮೂಲಕ ಚಿಕ್ಕೋಡಿ ಸದಲಾಗ ಕ್ಷೆತ್ರದ ಅನೇಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಅತಿವೃಷ್ಟಿಯಲ್ಲಿ ಮನೆ ಕಳೆದಕೊಂಡ ಸಾವಿರಾರು ಫÀಲಾನುಭವಿಗಳಿಗೆ 5ಲಕ್ಷ ಮನೆ ಕಟ್ಟಲು ನೀಡಲಾಗಿದೆ ಎಂದರು.
 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ, ಸಂಸದ ಅಣ್ಣ ಸಾಹೇಬ್ ಜೊಲ್ಲೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ರಾಜ್ಯ ವಕ್ತಾರ ಎಂ.ಬಿ.ಜಿರಲಿ, ಜಿಲ್ಲಾಧ್ಯಕ್ಷ ಡಾ.  ರಾಜೇಶ್ ನೆರ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ  ಕವಟಗಿಮಠ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಮಾಜಿ ಸಚಿವ ಶಶಿಕಾಂತ್ ನಾಯಕ್, ರಾಜ್ಯ ಕಾರ್ಯದರ್ಶಿ ಉಜ್ವಾಲಾ ಬಡವನಾಚೆ, ವಿಜಯ ಸಂಕಲ್ಪ  ಯಾತ್ರೆಯ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ ಇದ್ದರು.
                                                    

         
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ
[08/03, 5:16 PM] Bjp Media: 8-3-2023
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಸ್ಥಳದಲ್ಲಿ
ಬಿಜೆಪಿ ಜಯಭೇರಿ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಸ್ಥಳದಲ್ಲಿ ಬಿಜೆಪಿ ಜಯಭೇರಿ ದಾಖಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಯಭಾಗದಲ್ಲಿ ಇಂದು ವಿಜಯ ಸಂಕಲ್ಪಯಾತ್ರೆಯಲ್ಲಿ ಮಾತನಾಡಿ, ದೇಶದ ಅಭಿವೃದ್ಧಿಗೆ ಹಗಲಿರುಲು ಶ್ರಮಿಸುತ್ತಿರುವ ನರೇಂದ್ರ ಮೋದಿಯವರನ್ನು ಪ್ರಪಂಚವೇ ಮೆಚ್ಚುತ್ತಿದೆ; ಪಕ್ಷದ ಸಾಧನೆಯನ್ನು ಜನತೆ ಮೆಚ್ಚಿದ್ದಾರೆ. ಇದು ಯಾತ್ರೆಗಳ ಜನಬೆಂಬಲದಲ್ಲಿ ವ್ಯಕ್ತವಾಗುತ್ತಿದೆ ಎಂದರು.
ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ತಾಯಿ ಮಗನ ಕಾಂಗ್ರೆಸ್ ಪಕ್ಷ ಸುಳ್ಳು ಹೇಳುವುದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದೆ. ಬಾಯಿ ಚಪಲಕ್ಕೆ ರಾಷ್ಟ್ರವನ್ನೇ ಅವಮಾನ ಮಾಡುವದನ್ನು ಕಲಿತಿರುವ ಕಾಂಗ್ರೆಸ್ ಪಕ್ಷಕ್ಕೆ ಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲು ಕರೆ ನೀಡಿದರು.
ದೇಶದ ಜನತೆ ಒಗ್ಗಟ್ಟಿನಿಂದ ಬ್ರಿಟಿμï ರನ್ನು ದೇಶ ಬಿಟ್ಟ ಓಡಿಸಿದರೆ ರಾಹುಲ್ ಗಾಂಧಿ ಲಂಡನ್ ನಲ್ಲಿ ಮಾತನಾಡಿ ಭಾರತದ ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ದೇಶಕ್ಕೆ ಬನ್ನಿ ಎಂದಿದ್ದಾರೆ. ಈ ಮೂಲಕ ತನ್ನ ಅಪ್ರಬುದ್ದತೆ ತೋರಿಸಿರುವ ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕೆಂದರು .
 ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣ ಸಾಹೇಬ್ ಜೊಲ್ಲೆ, ಮಾಜಿ ಸಚಿವ ರಮೇಶ ಜಾರಕಿಹೊಳಿ,  ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ಜಿಲ್ಲಾಧ್ಯಕ್ಷ ಡಾ.  ರಾಜೇಶ್ ನೆರ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ  ಕೌಟಗಿಮಠ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಮಾಜಿ ಸಂಸದ ಅಮರಸಿಂಹ ಪಾಟೀಲ, ಮಾಜಿ ಸಚಿವ ಶಶಿಕಾಂತ್ ನಾಯಕ್, ರಾಜ್ಯ ಕಾರ್ಯದರ್ಶಿ ಉಜ್ವಾಲಾ ಬಡವನಾಚೆ, ವಿಜಯ ಸಂಕಲ್ಪ  ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ಸಹ ಸಂಚಾಲಕ ವಿವೇಕಾನಂದ ಡಬ್ಬಿ ಮತ್ತು ಸಾವಿರಾರು ಕಾರ್ಯಕರ್ತರು ಇದ್ದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ರಾಯಭಾಗದಲ್ಲಿರುವ  ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಿದರು. ಯಾತ್ರೆಗೆ ಆಗಮಿಸಿದ್ದ ನಾಯಕರಿಗೆ ಕ್ಷೇತ್ರದ ಮಹಿಳಾ ಕಾರ್ಯಕರ್ತರು ಪೂರ್ಣಕುಂಭ ಸ್ವಾಗತ ನೀಡಿ ಯಾತ್ರೆಯುದ್ದಕ್ಕೂ ಸಂಚರಿಸಿದರು.
                  

         
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ
[08/03, 5:16 PM] Bjp Media: 8-3-2023
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ಜೆ.ಪಿ.ನಡ್ಡಾ ಅವರ ಪ್ರವಾಸ ವಿವರ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ (9-3-2023) ರಾಜ್ಯಕ್ಕೆ ಭೇಟಿ ಕೊಡಲಿದ್ದು, ಸಂಜೆ ಕೆ.ಆರ್.ಪುರದಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವರು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ.
ಸಂಜೆ 5.20ಕ್ಕೆ ಅವರು ಎಚ್‍ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸುವರು. ಬಳಿಕ 5.35ಕ್ಕೆ ಅವರಿಗೆ ಕೆ.ಆರ್.ಪುರದ ಗಣಪತಿ ದೇವಸ್ಥಾನದ ಬಳಿ ಮಹಿಳಾ ಕಾರ್ಯಕರ್ತೆಯರು ಪೂರ್ಣಕುಂಭ ಸ್ವಾಗತ ಕೋರಲಿದ್ದಾರೆ. ನಂತರ ಅವರು ರೋಡ್ ಷೋ ಮೂಲಕ ಸಾರ್ವಜನಿಕ ಸಭೆ ನಡೆಯುವ ಸರಕಾರಿ ಕಾಲೇಜು ಮೈದಾನಕ್ಕೆ ತೆರಳುವರು.
ಸಾರ್ವಜನಿಕ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಬೈರತಿ ಬಸವರಾಜ್, ಎಂ.ಟಿ.ಬಿ.ನಾಗರಾಜ್, ಮುನಿರತ್ನ, ಡಾ. ಸುಧಾಕರ್ ಅವರು ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ. 


         
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ
[08/03, 5:16 PM] Bjp Media: 08-03-2023

ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ವಿಜಯ ಸಂಕಲ್ಪ ಯಾತ್ರೆಗೆ ಆಟೋ, ಬೈಕ್ ರ್ಯಾಲಿ ಸಾಥ್ 
ಬೆಂಗಳೂರು: ಚನ್ನರಾಯಪಟ್ಟಣದಲ್ಲಿ ವಿಜಯ ಸಂಕಲ್ಪ ಯಾತ್ರೆಯ ಅದ್ದೂರಿ ಮೆರವಣಿಗೆ ನಡೆಯಿತು. ಆಟೋ ಮೆರವಣಿಗೆ, ಬೈಕ್ ರ್ಯಾಲಿಯು ಆಕರ್ಷಣೆಗೆ ಕಾರಣವಾಗಿತ್ತು. ಯಾತ್ರೆಯ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ರಥಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಅಧ್ಯಕ್ಷ ಹುಲ್ಲಳ್ಳಿ ಸುರೇಶ, ಸ್ಥಳೀಯ ನಾಯಕರು ಭಾಗವಹಿಸಿದ್ದರು.
ಕಾರ್ಯಕರ್ತರು ಭಾರತ್ ಮಾತಾ ಕಿ ಜೈ, ಬಿಜೆಪಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಜನರಿಗೆ ವಿವರಿಸಿ ಮತ್ತೆ ಬಿಜೆಪಿಯನ್ನೇ ಆಯ್ಕೆ ಮಾಡುವಂತೆ ವಿನಂತಿಸಲಾಯಿತು.                          



         
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ

Post a Comment

Previous Post Next Post