[11/03, 11:21 AM] Kpcc official: *ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ*
*ಬೆಂಗಳೂರು:*
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಯಣ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
'ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣ ಸಾವು ತಂದಿದೆ. ಧ್ರುವ ನಮ್ಮ ಕಾರ್ಯಾಧ್ಯಕ್ಷ ಎಂಬುದಕ್ಕಿಂತ ನಮ್ಮ ಕುಟುಂಬದ ಸದಸ್ಯ, ಸಹೋದರನಂತಿದ್ದರು. ನಮ್ಮ ಹೃದಯಕ್ಕೆ ಹತ್ತಿರವಾಗಿದ್ದಾರೆ. ಅವರ ಅಗಲಿಕೆ ಬಗ್ಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ ಎಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರಿಗೆ ಶನಿವಾರ ಬೆಳಗ್ಗೆ ಪ್ರತಿಕ್ರಿಯಿಸಿದರು.
ಹುಟ್ಟು ಸಾವಿನ ನಡುವೆ ಇರುವ ಸಮಯವನ್ನು ಹೇಗೆ ಸದ್ಬಳಕೆ ಮಾಡಬಹುದು ಎನ್ನುವುದಕ್ಕೆ ಧ್ರುವನಾರಾಯಣ್ ಉತ್ತಮ ಸಾಕ್ಷಿ. ಒಳ್ಳೆಯತನಕ್ಕೆ ಅವರು ಮತ್ತೊಂದು ಉದಾಹರಣೆ. ಅವರ ಸಾರ್ಥಕ ಬದುಕು ಆದರ್ಶಪ್ರಾಯ. ಅವರ ಅಗಲಿಕೆ ನಷ್ಟಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ರಾಜಕೀಯ ರಂಗಕ್ಕೆ ಬಹುದೊಡ್ಡ ನಷ್ಟ.
ಅವರು ಯಾವುದೇ ಜವಾಬ್ದಾರಿ ತೆಗೆದುಕೊಂಡರೂ ಸಮರ್ಥವಾಗಿ ನಿಭಾಯಿಸುತ್ತಿದ್ದರು. ಬಹಳ ಸಜ್ಜನ ರಾಜಕಾರಣಿ. ಮಾನವೀಯತೆ, ಸ್ನೇಹ, ಬೇರೆಯವರನ್ನು ನೋಯಿಸದ ವ್ಯಕ್ತಿತ್ವ ಹೊಂದಿದ್ದ ವ್ಯಕ್ತಿ. ಎಲ್ಲ ಸಮಾಜ, ಧರ್ಮದವರನ್ನು ಸಮಾನವಾಗಿ ಪ್ರೀತಿಯಿಂದ ಕಾಣುತ್ತಿದ್ದರು. ಎಷ್ಟೇ ಕಷ್ಟವಿದ್ದರೂ ಬಹಳ ತಾಳ್ಮೆಯಿಂದ ಕೆಲಸ ಮಾಡುತ್ತಿದ್ದರು. ಅವರು ಪಕ್ಷದ ದೊಡ್ಡ ಆಸ್ತಿ ಆಗಿದ್ದರು. ರಾಜ್ಯ ರಾಜಕೀಯದ ಇತಿಹಾಸದಲ್ಲಿ ಧ್ರುವನಾರಯಣ್ ಅವರ ಸೇವೆ ಒಂದು ಉತ್ತಮ ಅಧ್ಯಾಯ ಎಂದರು.
ಅವರ ಅಗಲಿಕೆ ಸುದ್ದಿ ತಿಳಿದ ಸೋನಿಯಾ ಗಾಂಧಿ ಅವರು ನನಗೆ ಕರೆ ಮಾಡಿ ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವಿಚಾರ ನಮಗೂ ನಂಬಲು ಸಾಧ್ಯವಾಗುತ್ತಿಲ್ಲ.
ಇಂದು ನಡೆಯಬೇಕಿದ್ದ ರಾಮನಗರದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಿದ್ದೇವೆ. ಈ ನಷ್ಟವನ್ನು ತಡೆಯಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಮಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ಸೇವೆ, ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ರಾಜ್ಯ ಪ್ರವಾಸ ಮಾಡಿದ್ದರು. ಚಾಮರಾಜನಗರ ಆಕ್ಸಿಜನ್ ದುರಂತ ಸಂದರ್ಭದಲ್ಲಿ ಅವರ ಸ್ಪಂದನೆ, ಬದ್ಧತೆ ಎಲ್ಲವೂ ಇತಿಹಾಸ ಪುಟ ಸೇರಲಿದೆ.
ಕೆಪಿಸಿಸಿ ಕಚೇರಿಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಿ ನಂತರ ಮೈಸೂರಿಗೆ ನಾನು ತೆರಳುತ್ತೇನೆ.
ಅವರ ಅಗಲಿಕೆ ನೋವು ನನ್ನನ್ನು ಆವರಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನಮ್ಮೆಲ್ಲರಿಗೂ ಭಗವಂತ ನೀಡಲಿ' ಎಂದು ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
[11/03, 1:49 PM] Kpcc official: *ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಪತ್ರಿಕಾ ಪ್ರಕಟಣೆ:*
*ಪ್ರಚಾರ ಹಾಗೂ ಚುನಾವಣೆಗಾಗಿ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವ ಬಿಜೆಪಿ*
*ಮೋದಿ ಅವರ ಸರ್ಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಮೂಲಕ 25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ*
ಭ್ರಷ್ಟ ಬಿಜೆಪಿ ಸರ್ಕಾರ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅವನತಿಯ ಹಾದಿಯಲ್ಲಿ ಸಾಗುತ್ತಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ.
ಅಪೂರ್ಣಗೊಂಡಿರುವ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಅನೇಕ ರಾದ್ಧಾಂತಗಳು ಸಂಭವಿಸಿದೆ. ಮುಳುಗುವ ಹಡಗನಂತಾಗಿರುವ ಬಿಜೆಪಿಯು ಈಗ ಸಾರ್ವಜನಿಕರ ರಕ್ಷಣೆಯನ್ನು ಪಣಕ್ಕಿಟ್ಟು ಜನರ ಜೀವದ ಜತೆ ಚೆಲ್ಲಾಟವಾಡುತ್ತಾ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹೆದ್ದಾರಿ ಉದ್ಘಾಟನೆಗೆ ಮುಂದಾಗಿದೆ.
ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಬಿಜೆಪಿ ಅವೈಜ್ಞಾನಿಕ ರಸ್ತೆ ವಿನ್ಯಾಸ, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸಿಲ್ಲ. ಇನ್ನು ರೈತರು ತಮ್ಮ ಊರಿನಿಂದ ಪಟ್ಟಣಕ್ಕೆ ಹೋಗಲು ಸರಿಯಾದ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಈ ಎಲ್ಲ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.
*ವಾಸ್ತವಾಂಶಗಳು:*
* 2002ರಲ್ಲಿ ಕಾಂಗ್ರೆಸ್ ಸರ್ಕಾರ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾಡಿ, ಟೋಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.
* ಮಾರ್ಚ್ 04, 2014: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಾಯದ ಮೇರೆಗೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 275 ಆಗಿ ಅಧಿಸೂಚನೆ ಹೊರಡಿಸಿದರು.
* ಅಕ್ಟೋಬರ್ 4, 2016ರ ವೇಳೆಗೆ: ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ 4,400 ಕೋಟಿ ವೆಚ್ಚ ಮಾಡಿ 2500 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿತು.
* ಫೆಬ್ರವರಿ 13, 2018: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ 6420 ಕೋಟಿ ಹಣವನ್ನು ಮಂಜೂರು ಮಾಡಿತ್ತು.
ಬೆಂಗಳೂರಿನಿಂದ ನಿಡಘಟ್ಟದ 56 ಕಿ.ಮೀ ಉದ್ದ ರಸ್ತೆಗೆ 3501 ಕೋಟಿ
ನಿಡಘಟ್ಟದಿಂದ ಮೈಸೂರಿನ 62 ಕಿ.ಮೀ ಉದ್ದದ ರಸ್ತೆಗೆ 2919 ಕೋಟಿ ನೀಡಿತ್ತು.
ಈಗ ಈ ರಸ್ತೆಯ ಒಟ್ಟು ವೆಚ್ಚ 10 ಸಾವಿರ ಕೋಟಿ ಅಂದಾಜು ಮಾಡಲಾಗಿದೆ.
* ಮಾರ್ಚ್ 12, 2023ರಂದು: ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಉದ್ಘಾಟನೆ ಮಾಡುತ್ತಿವೆ. ಆಮೂಲಕ ಮುಂಬರುವ ಚುನಾವಣೆಯಲ್ಲಿ 40% ಕಮಿಷನ್ ಭ್ರಷ್ಟಾಚಾರದ ಹೊರತಾಗಿ ತಮ್ಮ ಸಾಧನೆ ಏನೂ ಇಲ್ಲದ ಕಾರಣ ಈ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದೆ.
ಹೀಗಾಗಿ ನಮ್ಮ ಈ ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಅವರ ಸರ್ಕಾರ ಉತ್ತರ ನೀಡಲಿ:
1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ.
*ಅಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?*
2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ.
* 50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ.
* 12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ.
* 12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ.
* 18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ
*ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?*
3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ.
*ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?*
4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ.
*2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ.* ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ.
*ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ?*
5. ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ.
118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ.
ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ.
10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ.
*ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?*
6. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ.
*ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?*
7. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ.
*ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?*
8. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ.
*ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?*
[11/03, 3:13 PM] Kpcc official: *ಧೃವನಾರಾಯಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*
‘ಕಾಂಗ್ರೆಸ್ ಪಕ್ಷ ಹಾಗೂ ರಾಜಕಾರಣದ ಪರಿವಾರಕ್ಕೆ ಧೃವನಾರಾಯಣ ಅವರ ಅಗಲಿಕೆ ದೊಡ್ಡ ಆಘಾತ ತಂದಿದೆ. ಭಗವಂತ ಯಾಕೆ ಇಷ್ಟು ಕ್ರೂರಿಯಾಗಿದ್ದಾನೆ ಎಂದು ತಿಳಿಯುತ್ತಿಲ್ಲ. ಧೃವನಾರಾಯಣ ಅವರು ಅಜಾತ ಶತ್ರು. ಕಾಂಗ್ರೆಸ್ ಪಕ್ಷಕ್ಕೆ ಧೃವತಾರೆಯಾಗಿ ಸಮಾಜದ ಎಲ್ಲ ಸಮಾಜದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದ ಸರಳ ನಾಯಕರು.
ತಮಗೆ ಕೊಟ್ಟ ಜವಾಬ್ದಾರಿಯನ್ನು ಚಾಚೂ ತಪ್ಪದೆ ನಿಭಾಯಿಸಿ ಪಕ್ಷಕ್ಕೆ ನಿಷ್ಠೆ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆಗೆ ಮತ್ತೊಂದು ಹೆಸರಾಗಿ ಇದ್ದರು. ನಮ್ಮ ಕಾರ್ಯಾಧ್ಯಕ್ಷರಾಗಿ ಕೋವಿಡ್ ಸಮಯದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ನಿರ್ವಹಿಸಿದ ರೀತಿ, ಅವರ ಬದ್ಧತೆ ಅವಿಸ್ಮರಣೀಯ.
ನನ್ನ ಹಾಗೂ ಧೃವನಾರಾಯಣ ಅವರ ಸ್ನೇಹವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರು ನನಗೆ ಕೇವಲ ಕಾರ್ಯಾಧ್ಯಕ್ಷರಾಗಿರಲ್ಲಿಲ್ಲ. ನನ್ನ ಸಹೋದರನಂತೆ ಕುಟುಂಬದ ಸದಸ್ಯರಾಗಿದ್ದರು. ನನ್ನ ರಾಜಕೀಯ ಪಯಣದಲ್ಲಿ ಧೃವನಾರಾಯಣ ಅವರು ನನ್ನ ಜತೆ ಹೆಜ್ಜೆ ಹಾಕಿದ್ದರು. ಪಕ್ಷದ ಸಿದ್ಧಾಂತವನ್ನು ಸಮರ್ಥವಾಗಿ ಪ್ರತಿಪಾದಿಸಿಕೊಂಡು, ಜನಸಾಮಾನ್ಯರ ಜತೆ ಸಾಮಾನ್ಯನಾದಗಿ ಬೆರೆತು ಅವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ನಾಯಕ ಧೃವನಾರಾಯಣ ಅವರು.
ಬೆಳಗ್ಗೆ 6.30ಕ್ಕೆ ನಮ್ಮ ಮನೆಯವರಿಗೆ ಧೃವನಾರಾಯಣ ಅವರ ಪರಿಸ್ಥಿತಿಗೆ ಬಗ್ಗೆ ಕರೆ ಮಾಡಿ ತಿಳಿಸಿದ್ದರು. ಇದಾದ ಐದು ನಿಮಿಷಕ್ಕೆ ಅವರು ನಮ್ಮನ್ನು ಅಗಲಿದ್ದಾರೆ ಎಂದು ಸುದ್ದಿ ಬಂತು. ಅವರು ಕಾಂಗ್ರೆಸ್ ಕುಟುಂಬದ ಕೆಲಸವನ್ನು ಶ್ರದ್ಧೆಯಿಂದ ಮಾಡಿಕೊಂಡು ಬಂದಿದ್ದರು. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳ ಉಸ್ತುವಾರಿ ಹೊತ್ತು, ಪಕ್ಷದಲ್ಲಿನ ಸಮಸ್ಯೆ ಬಗೆಹರಿಸಿಕೊಂಡು ಬರುತ್ತಿದ್ದರು.
1983ರಲ್ಲಿ ವಿದ್ಯಾರ್ಥಿ ನಾಯಕರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಧೃವನಾರಾಯಣ ಅವರ ಜತೆ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೆ. ಅವರು ಎನ್ಎಸ್ ಯುಐ ಅಧ್ಯಕ್ಷರಾಗಿ, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆ ಮಾಡಿದ್ದರು. ನಾನು ಬೇಗನೆ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಅವರು ಮಾತ್ರ ಸುದೀರ್ಘ 2 ದಶಕಗಳ ಕಾಲ ಪಕ್ಷ ಸಂಘಟನೆ ಮಾಡಿ ನಂತರ ಚುನಾವಣೆಗೆ ಸ್ಪರ್ಧಿಸಿದರು. ಶಾಸಕರಾಗಿ, ಸಂಸದರಾಗಿ ಜನಸೇವೆ ಮಾಡಿದ್ದ ಧೃವನಾರಾಯಣ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಾನು ಎಲ್ಲೇ ಹೋದರು, ಆ ಕಾರ್ಯಕ್ರಮಗಳ ಆಯೋಜನೆ ಜವಾಬ್ದಾರಿ ತೆಗೆದುಕೊಂಡು ನನಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದರು. ನಂಜನಗೂಡು ಪ್ರಜಾಧ್ವನಿ ಯಾತ್ರೆಯನ್ನು ಅಭೂತಪೂರ್ವವಾಗಿ ಆಯೋಜಿಸಿದ್ದರು. ಅವರ ಬಯಕೆ ಏನಿತ್ತು, ನಾವು ಏನು ತೀರ್ಮಾನ ಮಾಡಿದ್ದೆವು ಎಂಬುದನ್ನು ಈ ವೇದಿಕೆಯಲ್ಲಿ ಮಾತನಾಡುವುದಿಲ್ಲ. ನಾವು ಅವರನ್ನು ಕಳೆದುಕೊಂಡಿದ್ದೇವೆ. ನಮ್ಮ ಎಐಸಿಸಿ ಎಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಳ ಆತ್ಮೀಯರಾಗಿದ್ದರು. ಖರ್ಗೆ ಅವರು, ನಾನು, ಶ್ರೀನಿವಾಸ ಪ್ರಸಾದ್ ಅವರು ಬಲವಂತವಾಗಿ ಅವರನ್ನು ಲೋಕಸಭೆಗೆ ಕಳುಹಿಸಿದ್ದೆವು.
ಈ ಕಟ್ಟದ ಕೆಳಭಾಗದಲ್ಲಿ ಅವರ ಕಚೇರಿ ಇದೆ. ಮೇಲೆ ಅವರ ಫೋಟೋ ಇಟ್ಟು ಶ್ರದ್ದಾಂಜಲಿ ಸಭೆ ಮಾಡುತ್ತಿರುವುದನ್ನು ನಂಬಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಂಜನಗೂಡಿನ ಭಾರತ ಜೋಡೋ ಯಾತ್ರೆ ಸಮಯದಲ್ಲಿ ಅವರು ಬದನಾಳುವಿನಲ್ಲಿ ಸರ್ಣಿಯರು ಹಾಗೂ ದಲಿತರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಬಗೆಹರಿಸುವಂತೆ ರಾಹುಲ್ ಗಾಂಧಿಗೆ ಸಲಹೆ ಕೊಟ್ಟರು. ಅವರ ಸಲಹೆಯಂತೆ ಎರಡು ಸಮುದಾಯದವರನ್ನು ಕರೆಸಿ ಮನಸ್ಥಾಪ ದೂರ ಮಾಡಿ ಎರಡು ಸಮುದಾಯದವರನ್ನು ಒಟ್ಟಾಗಿ ಕೂರಿಸಿ ಊಟ ಮಾಡಿ, ಎರಡೂ ಕೇರಿಗಳ ಮಧ್ಯೆ ಇದ್ದ ರಸ್ತೆ ಮರುಸ್ಥಾಪಿಸಲಾಯಿತು.
ಇಂದು ಮಧ್ಯಾಹ್ನ 2ಗಂಟೆಯಿಂದ ಸಂಜೆ 5ಗಂಟೆವರೆಗೂ ಅವರ ಪಾರ್ಥೀವ ಶರೀರವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇರಿಸಲಾಗುವುದು.
ಭಗವಂತ ನನ್ನ ಸಹೋದರನಾಗಿದ್ದ ಧೃವನಾರಾಯಣ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅವರ ಪಕ್ಷಾತೀತವಾಗಿ ಇರುವ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿ ನೀಡಲಿ.’
[11/03, 3:33 PM] Kpcc official: *ಧೃವನಾರಾಯಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:*
*ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ:*
‘ನಾವು ಈ ಶ್ರದ್ಧಾಂಜಲಿ ಸಭೆ ಮಾಡುತ್ತೇವೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ಪಕ್ಷದ ಅತ್ಯಂತ ನಗುಮುಖದ ನಾಯಕ, ಪ್ರತಿ ಕಾರ್ಯಕರ್ತರ ಮಾತು ಆಲಿಸುತ್ತಿದ್ದ ನಾಯಕ ಧೃವನಾರಯಣ್ ಅವರಾಗಿದ್ದರು. ಶೋಷಿತ ಹಾಗೂ ವಂಚಿತ ವರ್ಗದ ಜನರ ಕಲ್ಯಾಣಕ್ಕೆ ಶ್ರಮಿಸಿದ ಜೀವ ಧೃವನಾರಾಯಣ್ ಅವರು. ಅವರು ವಿವಿಧ ಹುದ್ದೆ ಅಲಂಕರಿಸಿದರು. ನಮ್ಮೆಲ್ಲರಿಗೂ ಆತ್ಮೀಯರಾಗಿದ್ದರು. ಅನೇಕ ಹುದ್ದೆ ಅಲಂಕರಿಸಿದ ನಂತರವೂ ಸಾಧಾರಣ ಕಾರ್ಯಕರ್ತನಾಗಿ ಉಳಿಯುವುದಕ್ಕೆ ಜೀವಂತ ಉದಾಹರಣೆಯಾಗಿದ್ದವರು ಧೃವನಾರಾಯಣ್.
ನಾನು ನಿನ್ನೆ ಸಂಜೆ 5 ಗಂಟೆಗೆ ನಾನು ಇಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೆ. ಅವರು ನಂಜನಗೂಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇನೆ ಎಂದಿದ್ದರು. ಬೆಳಗ್ಗೆ ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಬೆಳಗ್ಗೆ ಅವರಿಂದ ಕರೆ ಬರಲೇ ಇಲ್ಲ. ಅವರ ಕುರಿತಾಗಿ ಬಂದ ಕರೆಯಲ್ಲಿ ಅವರು ನಮ್ಮ ಜೊತೆ ಇಲ್ಲ ಎಂಬ ಸುದ್ದಿ ಬಂದಿತು. ನಿನ್ನೆಯಷ್ಟೇ ನಾನು ಅವರೊಂದಿಗೆ ಮಾತನಾಡಿದ್ದು, ಇದನ್ನು ನನಗೆ ನಂಬಲು ಸಾಧ್ಯವಾಗಲೇ ಇಲ್ಲ. ನಾನು ತಕ್ಷಣೆ ಡಿ.ಕೆ. ಶಿವಕುಮಾರ್ ಹಾಗೂ ಮೈಸೂರಿಗೆ ಕರೆ ಮಾಡಿದೆ.
ಆ ದೇವರಿಗೆ ಅವರ ಮೇಲೆ ಪ್ರೀತಿ ಹೆಚ್ಚಾಗಿ ಅವರನ್ನು ಕರೆದುಕೊಂಡು ಹೋಗಿದ್ದಾನೆ. ಅಂತಹ ಸ್ನೇಹಿತ ನಮಗೆ ಮತ್ತೆ ಸಿಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಅವರಂತಹ ಕಾರ್ಯಕರ್ತ ಹಾಗೂ ನಾಯಕ ಸಿಗುವುದಿಲ್ಲ. ಅವರನ್ನು ನಾವು ಸದಾ ಹಸನ್ಮುಖಿ ಧೃವನಾರಾಯಣ ಅವರನ್ನೇ ಸ್ಮರಿಸುತ್ತೇವೆ. ಅವರು ಶೋಷಿತರು, ಬಡವರಿಗಾಗಿ ಮಿಡಿಯುತ್ತಿದ್ದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಈ ಅಘಾತಕಾರಿ ಸುದ್ದಿ ನಂಬಲು ಸಾಧ್ಯವಾಗಿಲ್ಲ. ಅವರು ಕಾಂಗ್ರೆಸ್ ಕುಟುಂಬದ ಸದಸ್ಯರಾಗಿದ್ದರು. ಧೃವನಾರಾಯಣ ಅವರು ಎಲ್ಲಿಯೇ ಇರಲಿ, ಹೇಗಿಯೇ ಇರಲಿ, ಈಶ್ವರ ಅವರ ಜತೆಯಲ್ಲಿರುತ್ತಾನೆ ಎಂಬ ವಿಶ್ವಾಸ ನನಗಿದೆ.
ಅವರ ಆಶಯದಂತೆ ಕಾಂಗ್ರೆಸ್ ಪಕ್ಷ ಶೋಷಿತರ ವರ್ಗದ ಜನರ ಪರವಾಗಿ ಕೆಲಸ ಮುಂದುವರಿಸಲಿದೆ. ಆಮೂಲಕ ಕಾಂಗ್ರೆಸ್ ಹಾಗೂ ಕಾರ್ಯಕರ್ತರ ಮನದಲ್ಲಿ ಧೃವನಾರಾಯಣ ಅವರು ಸದಾ ಜೀವಂತವಾಗಿರಲಿದ್ದಾರೆ.’
*ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್:*
ದಿವಂಗತ ಧೃವನಾರಾಯಣ ಅವರು ಇಂದು ನಮ್ಮನ್ನಗಲಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಿನಿಂದ ಕಾಂಗ್ರೆಸ್ ಪಕ್ಷ ಹಾಗೂ ಸಿದ್ಧಾಂತದ ಬಗ್ಗೆ ಅಚಲವಾದ ನಂಬಿಕೆ ಇಟ್ಟುಕೊಂಡು ಕಾರ್ಯಕರ್ತನಾಗಿ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು ಎಎಸ್ ಯುಐ, ಯೂಥ್ ಕಾಂಗ್ರೆಸ್, ನಂತರ ಕೆಪಿಸಿಸಿಯಲ್ಲಿ ಕೆಲಸ ಮಾಡಿಕೊಂಡು 2 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ.
ಧೃವನಾರಾಯಣ್ ಅವರ ಹಿನ್ನಲೆ ನೋಡಿದರೆ, ನಿಷ್ಕಳಂಕವಾಗಿ ಶುದ್ಧ ರಾಜಕಾರಣಿ. ಅವರು ಬೇರೆಯವರು ತಮ್ಮತ್ತ ಬೆಟ್ಟು ಮಾಡಿ ತೋರಿಸಲು ಅವಕಾಶ ನೀಡಲಿಲ್ಲ. ಅವರು ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದವರು, ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವುಗಳು ನಿರೀಕ್ಷೆ ಮಾಡಿರಲಿಲ್ಲ. ಅವರು ಸಾಮಾಜಿಕ ನ್ಯಾಯದ ಬಗ್ಗೆ ಆಸಕ್ತಿ ಹೊಂದಿದ್ದರು. ಅವರಂತಹ ನಾಯಕರು ರಾಜಕಾರಣದಲ್ಲಿ ಬಹಳ ವಿರಳ. ಸಂವಿಧಾನ, ಪ್ರಜಾಪ್ರಭುತ್ವ, ದುರ್ಬಲ ವರ್ಗದ ಬಗ್ಗೆ ಕಾಳಜಿ ಮಾಡುತ್ತಿದ್ದರು. ಅವರ ಅಗಲಿಕೆ, ಕೇವಲ ಅವರ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ. ರಾಜ್ಯ ರಾಜಕಾರಣಕ್ಕೆ ನಷ್ಟವಾಗಿದೆ. ಅವರು ಯಾವ ರೀತಿ ಕಾರ್ಯಪ್ರವೃತ್ತರಾಗುತ್ತಿದ್ದರೋ ಅದೇ ರೀತಿ ನಾವು ಕಾರ್ಯನಿರ್ವಹಿಸಬೇಕು. ವೈಯಕ್ತಿಕವಾಗಿ, ಪಕ್ಷದ ಪರವಾಗಿ ಅವರಿಗೆ ತುಂಬು ಹೃದಯದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆ ನೋವು ಎದುರಿಸುವ ಧೈರ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
*ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್:*
ಧೃವನಾರಾಯಣ ಅವರ ಅಗಲಿಕೆ ಸುದ್ದಿ ಕೇಳಿ ನಮ್ಮೆಲ್ಲರಿಗೂ ದಿಗ್ಬ್ರಮೆಯಾಗಿದೆ. ಅವರೊಬ್ಬ ಸರಳ ಸಜ್ಜನಿಕೆ, ಕ್ರಿಯಾಶೀಲ ರಾಜಕಾರಣಿ. ಅವರು ಶಾಸಕರಾಗಿದ್ದಾಗಲೂ ಅಷೇಟ್ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರು. ಸಂಸದರಾಗಿದ್ದಾಗ ರಾಜ್ಯದ ನೆಲ, ಜಲ, ಭಾಷೆ ವಿಚಾರ ಬಂದಾಗ ಸದನದಲ್ಲಿ ಧ್ವನಿ ಎತ್ತಿ ರಾಜ್ಯಕ್ಕೆ ನ್ಯಾಯ ಸಿಗುವಂತೆ ಮಾಡಲು ಹೋರಾಟ ಮಾಡಿದ್ದರು. ಅವರು ಕಾಳಜಿ ಹಾಗೂ ಬದ್ಧತೆ ಇದ್ದ ನಾಯಕ. ಅವರು ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂಬ ಊಹೆ ನಾವು ಮಾಡಿರಲಿಲ್ಲ. ಪಕ್ಷದ ಬಗ್ಗೆ ನಿಷ್ಠೆ, ಬದ್ಧತೆ, ಜನಪರ ಕಾಳಜಿ ಹೊಂದಿದ್ದ ವ್ಯಕ್ತಿ, ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ನೆಮ್ಮೆಲ್ಲ ನಾಯಕರು ಕಾರ್ಯಕರ್ತರು ಅವರನ್ನು ನೋಡಿ ಕಲಿಯಬೇಕಿದೆ.
ಅವರು ಕಾಂಗ್ರೆಸ್ ಮಾತ್ರವಲ್ಲ ಬೇರೆ ಪಕ್ಷದವರಿಗೂ ಮಾದರಿಯಾಗಿದ್ದರು. ಅವರ ಅಗಲಿಕೆಯಿಂದ ರಾಜ್ಯಕ್ಕೆ ನಷ್ಟವಾಗಿದೆ. ಕಾಂಗ್ರೆಸ್ ಪರಿವಾರಕ್ಕೆ ತೀವ್ರ ಆಘಾತವಾಗಿದೆ. ಒಂದು ಕಾಲದಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ, ನಂಜನಗೂಡು, ಗುಂಡ್ಲುಪೇಟೆ, ಚಾಮರಾಜನಗರ ಭಾಗದ ನೀರಾವರಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿದ್ದರು. ಅಂತಹ ಜನನಾಯಕ ಸಿಗುವುದು ಬಹಳ ವಿರಳ. ಅವರನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸೋಣ.
[11/03, 6:23 PM] Kpcc official: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ, ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ಡಿ ಕೆ ಸುರೇಶ್ ಅವರು ಮೈಸೂರಿನಲ್ಲಿ ಧ್ರುವನಾರಾಯಣ್ ಅವರ ಪಾರ್ಥಿವ ಶರೀರಕ್ಕೆ ಶನಿವಾರ ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
[11/03, 6:42 PM] Kpcc official: ಮೈಸೂರು ಡಿಸಿಸಿ ಕಚೇರಿ ಆವರಣದಲ್ಲಿ ಧ್ರುವನಾರಾಯಣ್ ಅವರ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಶನಿವಾರ ಸಂಜೆ ಅಂತಿಮ ಗೌರವ ಸಮರ್ಪಣೆ.
[12/03, 4:31 PM] Kpcc official: ಚಾಮರಾಜನಗರದ ಹೆಗ್ಗವಾಡಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಹಿರಿಯ ಮುಖಂಡ ಧ್ರುವನಾರಾಯಣ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು ಆಪ್ತಮಿತ್ರನಿಗೆ ಅಶ್ರುತರ್ಪಣಯುಕ್ತ ಅಂತಿಮ ವಿದಾಯ ಹೇಳಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
[12/03, 9:55 PM] Kpcc official: ಗೆ,
*ಮಾನ್ಯ ಸಂಪಾದಕರು / ಮುಖ್ಯ ವರದಿಗಾರರು*
ಬೆಂಗಳೂರು
*ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ*
ಆತ್ಮೀಯರೇ
*14 ಇಂದಿರಾ ಕ್ಯಾಂಟೀನ್ ಮತ್ತು 16 ಮೊಬೈಲ್ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಿ ಬಡವರ ತುತ್ತು ಅನ್ನಕ್ಕೂ ಕುತ್ತು ತಂದಿರುವ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ*
ಬಡವರ, ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ, ಶ್ರಮಿಕ ವರ್ಗದ ಹಸಿವು ನೀಗಿಸಲು ಸನ್ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ *ಸಿದ್ದರಾಮಯ್ಯ* ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ *ಇಂದಿರಾ ಕ್ಯಾಂಟೀನ್* ಯೋಜನೆಯನ್ನು ಜನವಿರೋಧಿ ಬಿಜೆಪಿ ಸರ್ಕಾರ ಮುಚ್ಚಿ ಹಾಕಲು ಹುನ್ನಾರ ನಡೆಸುತ್ತಿದೆ.
ಸರ್ಕಾರದ ನಡೆಯನ್ನು ಖಂಡಿಸಿ ನಾಳೆ *ದಿನಾಂಕ 13-03-2023ರ ಸೋಮವಾರ ಬೆಳ್ಳಿಗೆ 11.30 ಗಂಟೆಗೆ ಇಂದಿರಾ ಕ್ಯಾಂಟೀನ್ ಬೃಂದಾವನನಗರ, ರಾಜೀವ್ ಗಾಂಧಿ ಸ್ಟೇಡಿಯಂ ಹತ್ತಿರ, ಧೋಬಿಘಾಟ್ ಕ್ವಾಟ್ರಸ್, ಹನುಮಂತನಗರ* ದಲ್ಲಿ ಸನ್ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ಶ್ರೀ ರಾಮಲಿಂಗಾ ರೆಡ್ಡಿರವರ ನೇತೃತ್ವದಲ್ಲಿ ಉಚಿತವಾಗಿ ಊಟ ನೀಡುವುದರ ಮುಖಾಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.*
ಈ ಪ್ರತಿಭಟನೆಯಲ್ಲಿ ಮಾನ್ಯ ಸಂಸದರು, ಶಾಸಕರು, ಪಕ್ಷದ ಹಿರಿಯ ಮುಖಂಡರುಗಳು, ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಶಾಸಕರು, ಮಾಜಿ ಮಹಾಪೌರರುಗಳು ಭಾಗವಹಿಸಲಿದ್ದಾರೆ.
*ದಯಮಾಡಿ ತಮ್ಮ ಘನ ಮಾಧ್ಯಮ ವರದಿಗಾರರನ್ನು / ಛಾಯಾಗ್ರಾಹಕರನ್ನು ವರದಿಗಾಗಿ ಕಳುಹಿಸಿಕೊಡಬೇಕಾಗಿ ತಮ್ಮಲ್ಲಿ ಕೋರುತ್ತೇನೆ.*
https://maps.app.goo.gl/kXpWUqwtNWwkT8n5A?g_st=iw
ವಂದನೆಗಳೊಂದಿಗೆ
*ಜಿ.ಶೇಖರ್* , ಅಧ್ಯಕ್ಷರು, ಬಿಸಿಡಿಸಿಸಿ – 9972596757
*ಜಿ.ಕೃಷ್ಣಪ್ಪ* , ಅಧ್ಯಕ್ಷರು, ಬಿಎಸ್‌ಡಿಸಿಸಿ - 9845536036
*ಎಂ.ರಾಜ್ ಕುಮಾರ್* ಅಧ್ಯಕ್ಷರು, ಬಿಎನ್‌ಡಿಸಿಸಿ - 9900000126
Post a Comment