[21/04, 9:30 PM] Kpcc official: *Shri KC Venugopal on Twitter*
Since the day Sh. Satyapal Malik exposed the corrupt, incompetent and power hungry nature of the Modi govt, it was clear that he will be targeted by the PM’s lapdog agencies.
Modi ji, these agencies are meant to catch actual criminals, not to settle your political scores.
https://twitter.com/kcvenugopalmp/status/1649436561778569217?s=48&t=zcaj-4Ucgz-esGYRZ305iw
[22/04, 9:07 AM] Kpcc official: *Shri Mallikarjun Kharge on Twitter*:
Greetings to my fellow citizens on the joyous occasion of Eid-ul-Fitr.
Eid evokes feelings of fraternity, compassion & sharing in all and strengthens the pluralistic bonds of our people.
May the celebrations usher prosperity and be an opportunity to serve humanity.
#EidMubarak
https://twitter.com/kharge/status/1649599483959820289
[22/04, 11:38 AM] Kpcc official: ಬಿಜೆಪಿ ಮುಖಂಡರಾದ ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ ಹಾಗೂ ಅರವಿಂದ್ ಚೌಹಾಣ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
[22/04, 12:41 PM] Kpcc official: *ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ವಕ್ತಾರ ಗೌರವ್ ವಲ್ಲಬ್ ಹಾಗೂ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅವರ ಮಾತುಗಳು*
ಕಾಂಗ್ರೆಸ್ ಪಕ್ಷದ ನಾಲ್ಕು ಗ್ಯಾರಂಟಿ ಯೋಜನೆಗಳು ಬಿಜೆಪಿಯ 40% ಕಮಿಷನ್ ಭ್ರಷ್ಟಾಚಾರಕ್ಕಿಂತ ಬಹಳ ಉತ್ತಮ ಎಂದು ಅರಿತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ.
ಈ ಚುನಾವಣೆ 4 ಗ್ಯಾರಂಟಿ ಯೋಜನೆ ಹಾಗೂ 40% ಕಮಿಷನ್ ನಡುವಣ ಸಮರ. ಹೀಗಾಗಿ ರಾಜ್ಯದ ಪ್ರಗತಿ, ಕನ್ನಡದ ಅಸ್ಮಿತೆ ಉಳಿಸಲು, ಕರ್ನಾಟಕ ಏಷ್ಯಾದ ಸಿಲಿಕಾನ್ ವ್ಯಾಲಿಯನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಜನರಿಗೆ ಅರಿವಾಗಿದೆ.
ಇಂದು ನಮ್ಮ ಜತೆ ಚಿಂತಾಮಣಿಯ ಡಾ.ವಿ. ಅಮರನಾಥ್ ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಉಳಿದಂತೆ ಮಹದೇಪುರದಿಂದ ಹುಡಿ ರಾಮಚಂದ್ರ, ಡಾ.ಎಸ್. ಭಾಗ್ಯ, ಅಂಜನಪ್ಪ ಯಾದವ್, ಕೆ.ಎಂ ಮುನಿರಾಜು, ಪರಮೇಶ್ವರ್ ಅವರು ಪಕ್ಷ ಸೇರುತ್ತಿದ್ದಾರೆ. ಆಮೂಲಕ 40% ಕಮಿಷನ್ ವಿರುದ್ಧದ ನಮ್ಮ ಹೋರಾಟದಲ್ಲಿ ಕೈ ಜೋಡಿಸಿದ್ದಾರೆ.
*ಎಲ್ ಹನುಮಂತಯ್ಯ*
ಇಂದು ಚಿಂತಾಮಣಿ ಹಾಗೂ ಮಹದೇಪುರ ಕ್ಷೇತ್ರದಿಂದ ಅತ್ಯಂತ ಕ್ರಿಯಾಶೀಲ ನಾಯಕರು ಪಕ್ಷ ಸೇರುತ್ತಿದ್ದಾರೆ. ಅಮರ್ ನನಗೆ ಬಹಳ ವರ್ಷಗಳಿಂದ ಪರಿಚಯವಿರುವ ವ್ಯಕ್ತಿ. ಜನತಾದಳದ ಎಸ್ ಸಿ ಮೋರ್ಚಾದ ಯುವ ಘಟಕ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿ ಪಕ್ಷಕ್ಕೆ ಬಲ ತುಂಬುತ್ತಿದ್ದಾರೆ. ಆಮೂಲಕ ನಮ್ಮ ಚಿಂತಾಮಣಿಯ ಅಭ್ಯರ್ಥಿ ಸುಧಾಕರ್ ಎಂಸಿಜಿ, ಅವರ ಗೆಲುವು ಇಂದು ಮತ್ತಷ್ಟು ನಿಶ್ಚಿತವಾಗಿದೆ.
ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ರಾಮಚಂದ್ರ ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷ ಸೇರುತ್ತಿದ್ದಾರೆ. ಇವರ ಜತೆಗೆ ಡಾ.ಎಸ್. ಭಾಗ್ಯ, ಅಂಜನಪ್ಪ ಯಾದವ್, ಕೆ.ಎಂ ಮುನಿರಾಜು, ಪರಮೇಶ್ವರ್ ಅವರು ಯಾವುದೇ ಆಸೆ ಆಮೀಷಗಳಿಲ್ಲದೇ, ಬೇಷರತ್ತಾಗಿ ಪಕ್ಷ ಸೇರುತ್ತಿದ್ದಾರೆ. ಇದರಿಂದ ಪಕ್ಷದ ಬಲ ಹೆಚ್ಚಲಿದೆ.
ಇಂದು ಕಾಂಗ್ರೆಸ್ ಪಕ್ಷ ರಾಜ್ಯದ ಅನೇಕ ಕ್ಷೇತ್ರಗಳ ನಾಯಕರು ಅದರಲ್ಲೂ ಯುವಕರು ಕಾಂಗ್ರೆಸ್ ಪಕ್ಷ ಬೆಂಬಲಿಸಲು ಮುಂದಾಗಿರುವುದು ಬಹಳ ಉತ್ತಮ ಬೆಳವಣಿಗೆ. ಇಂದು ಪಕ್ಷ ಸೇರುತ್ತಿರುವವರು ಯುವಕರಾಗಿದ್ದು, ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸ ಹೆಚ್ಚಿಗಿದೆ.
[22/04, 1:54 PM] Kpcc official: *ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮಕ್ಕೆ ಮಾಧ್ಯಮ ಆಹ್ವಾನ*
ಆತ್ಮೀಯರೆ,
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ 03.00 ಗಂಟೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಶ್ರೀ ಜೈರಾಮ್ ರಮೇಶ್ ಮತ್ತು ಎಐಸಿಸಿ ವಕ್ತಾರ, ಶ್ರೀ ಗೌರವ್ ವಲ್ಲಬ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ದಯಮಾಡಿ ಬನ್ನಿ.
[22/04, 2:59 PM] Kpcc official: ಬೆಂಗಳೂರಿನಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡ ಆತ್ಮೀಯ ಕ್ಷಣ...
[22/04, 3:45 PM] Kpcc official: *ಬಿ.ಎಲ್ ರಾಣಿ ಸಂಯುಕ್ತ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು*
*ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್:*
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಬಿ.ಎಲ್ ರಾಣಿ ಸಂಯುಕ್ತ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದು, ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಂದು ಮೂರನೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮವಾಗಿದ್ದು, ಇದು ರಾಜ್ಯದಲ್ಲಿ ಬದದಲಾವಣೆಗೆ ಸಾಕ್ಷಿಯಾಗಿದೆ.
ಬಿಜೆಪಿಯ ಹಲವು ಹಿರಿಯ ನಾಯಕರು ಕಾಂಗ್ರೆಸ್ ಸೇರಿದ್ದು, ಮೇ 10ರಂದು ಕರ್ನಾಟಕ ರಾಜ್ಯದ ಜನ ಬದಲಾವಣೆಗಾಗಿ ಮತ ಹಾಕಲಿದ್ದಾರೆ. ಬೆಲೆ ಏರಿಕೆ, ಭ್ರಷ್ಟಾಚಾರ, ದ್ವೇಷ ರಾಜಕಾರಣದಿಂದ ಮುಕ್ತಿ ಪಡೆಯಲು ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲಿದ್ದಾರೆ.
ರಾಣಿ ಸಂಯುಕ್ತಾ ಅವರ ಜತೆಗೆ 18 ಇತರ ಬಿಜೆರಿ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಪಕ್ಷದ ಎಲ್ಲಾ ನಾಯಕರ ಪರವಾಗಿ ಇವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರ ಮಾಡಿಕೊಳ್ಳುತ್ತೇನೆ.
*ರಾಣಿ ಸಂಯುಕ್ತಾ:*
ನಾನಿಂದು ಬಿಜೆಪಿ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದು, ಆ ಪಕ್ಷದಲ್ಲಿ ನಮಗೆ ಸಾಕಷ್ಟು ನೋವಾಗಿದೆ. ನಾವು ಅನೇಕ ದಿನಗಳಿಂದ ಕಾಂಗ್ರೆಸ್ ಪಕ್ಷವನ್ನು ಗಮನಿಸುತ್ತಿದ್ದೆವು. ಅವರು ಯಾರನ್ನೂ ಕೈಬಿಟ್ಟಿಲ್ಲ. ಆದರೆ ಬಿಜೆಪಿಯಲ್ಲಿ ಅದು ಆಗಿಲ್ಲ. ಕೇವಲ ಟಿಕೆಟ್ ಹಂಚಿಕೆ ಮಾತ್ರವಲ್ಲ, ಬಿಜೆಪಿಯಲ್ಲಿ ಎಲ್ಲರಿಗೂ ನೋವುಂಟು ಮಾಡಲಾಗಿದೆ. ನನಗಿಂತ ಮುಂಚಿತವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ.
ಕಾಂಗ್ರೆಸ್ ಪಕ್ಷ ಯಾವ ಸಿದ್ಧಾಂತದ ಮೇಲೆ ಸಾಗುತ್ತಿದೇಯೋ ಅದೇ ಸಿದ್ಧಾಂತದ ಮೇಲೆ ನಾವು ನಡೆಯುತ್ತೇವೆ. ನಮ್ಮ ಜಿಲ್ಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ.
*ಗೌರವ್ ವಲ್ಲಭ್:*
ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಜನಪರ ಕಾರ್ಯಗಳು ಶ್ರಮತಿ ರಾಣಿ ಸಂಯುಕ್ತಾ ಅವರು ಪಕ್ಷವನ್ನು ಸೇರುವಂತೆ ಸೆಳೆದಿದೆ. ಈ ಸಂದರ್ಭದಲ್ಲಿ ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಯ ಧೃವೀಕರಣ ರಾಜಕೀಯವನ್ನು, 40% ಕಮಿಷನ್ ಸರ್ಕಾರವನ್ನು ಮಣಿಸುತ್ತೇವೆ.
*ಪ್ರಶ್ನೋತ್ತರ:*
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರಕ್ಕೆ ಸಿಎಂ ಕಚೇರಿ ದುರ್ಬಳಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿ.ಕೆ ಹರಿಪ್ರಸಾದ್, ‘ಕೇವಲ ಮುಖ್ಯಮಂತ್ರಿ ಕಚೇರಿ ಮಾತ್ರವಲ್ಲ, ಎಲ್ಲಾ ಸಂಸ್ಥೆಗಳ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡಿದ್ದೇವೆ. ಇಡಿಯನ್ನು ಜಾರಿ ನಿರ್ದೇಶನಾಲಯ ಎನ್ನುವುದಕ್ಕಿಂತ ಬಿಜೆಪಿಯ ಚುನಾವಣಾ ವಿಭಾಗ ಎಂದು ಹೇಳಬಹುದು’ ಎಂದು ಟೀಕಿಸಿದರು.
ಜಗದೀಶ್ ಶೆಟ್ಟರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಬಿಜೆಪಿಯಲ್ಲಿ ಯಾರು ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಅವರ ಪಕ್ಷದ ಹಿರಿಯ ನಾಯಕ ಯತ್ನಾಳ್ ಅವರು ಹೇಳಿದ ಪ್ರಕಾರ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ಕೊಡಬೇಕು. ಈ ಮೊತ್ತವನ್ನು ಬಿಜೆಪಿಯಲ್ಲಿ ಯಾರು ನೀಡಲಿದ್ದಾರೆ ಎಂದು ಬಿಜೆಪಿ ಹೇಳಬೇಕು. ಮಂತ್ರಿಯಾಗಲು 100 ಕೋಟಿ ನೀಡಬೇಕು ಎಂದು ಹೇಳಿದ್ದು, 34 ಮಂದಿ ಯಾರು 100 ಕೋಟಿ ಕೊಟ್ಟು ಮಂತ್ರಿಯಾಗಲಿದ್ದಾರೆ ಎಂದು ಹೇಳಬೇಕು. ನಮ್ಮ ಪಕ್ಷದಲ್ಲಿ ಆರಿಸಿಬರುವ ಶಾಸಕರ ಅಭಿಪ್ರಾಯ ಪಡೆದು ಯಾರು ಮುಖ್ಯಮಂತ್ರಿಯಾಗಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುವುದು ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿ’ ಎಂದು ತಿಳಿಸಿದರು.
ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಿಂದ ಅವರ ಮೇಲೆ ನಿಗಾವಹಿಸಲಾಗಿದೆ ಎಂಬ ಪ್ರಶ್ನೆಗೆ, ‘ಕೇವಲ ಅವರು ಮಾತ್ರವಲ್ಲ, ನಮ್ಮೆಲ್ಲರೂ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.
[22/04, 5:36 PM] Kpcc official: ದಕ್ಷಿಣ ಕನ್ನಡದ ಬೆಳ್ತಂಗಡಿಯ ಉಜಿರೆಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮೇಲ್ಮನೆ ಸದಸ್ಯ ಮಂಜುನಾಥ ಭಂಡಾರಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
[22/04, 5:37 PM] Kpcc official: *ಉಜಿರೆಯ ಸಾರ್ವಜನಿಕ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*
ಇಂದು ಬೆಳಗ್ಗೆ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ. ಮಂಜುನಾಥನ ಸನ್ನಿದಾನದಲ್ಲಿ ಪ್ರಾರ್ಥನೆ ಮಾಡಿ ಜನಾರ್ದನ ದೇವಾಲಯದಲ್ಲಿ ದರ್ಶನ ಪಡೆದು ಇಲ್ಲಿಗೆ ಬಂದಿದ್ದೇನೆ.
ಇಂದು ಪವಿತ್ರ ರಂಜಾನ್ ಹಬ್ಬ. ಧರ್ಮ ಯಾವುದಾದರೂ ತತ್ವವೊಂದೋ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಇದರಲ್ಲಿ ನಂಬಿಕೆ ಇಟ್ಟುಕೊಂಡು ನಾವು ಬದುಕುತ್ತಿದ್ದೇವೆ. ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಮ್ಮ ತಂದೆ ತಾಯಂದಿರ ಕೃಪೆ, ಆಶೀರ್ವಾದದಿಂದ ನಾವು ಬೇಳೆದಿದ್ದೇವೆ. ಆಮೂಲಕ ಜಾತಿ ಹಾಗೂ ಧರ್ಮದ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಏನೇ ಆದರೂ ನಾವು ಮನುಷ್ಯರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಆಂತಿ ಸಿಗಲಿ ಎಂದು ಎಲ್ಲರಿಗೂ ತಮ್ಮ ಧರ್ಮ ಆಚರಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಧರ್ಮಪೀಠಗಳು ಮಾನವೀಯತೆ ಮೆರೆದಿವೆ. ನನಗೆ ಮಂಜುನಾಥನ ಬಗ್ಗೆ ವಿಶೇಷ ಆಸಕ್ತಿ ಹಾಗೂ ಭಕ್ತಿ.
ನನ್ನ ಯುವ ಮಿತ್ರ ರಕ್ಷಿತ್ ಗೆ ಯಶಸ್ಸು ಸಿಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿಕೊಂಡು ಬಂದಿದ್ದೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗಗಳು ಅಧಿಕಾರಕ್ಕೆ ಬಂದಂತೆ. ಈ ಕ್ಷೇತ್ರವನ್ನು ಮಾಜಿ ಶಾಸಕ ಬಂಗೇರಾ ಅವರು ಹಲವು ಬಾರಿ ಸ್ಪರ್ಧಿಸಿ ಸೋತು, ಗೆದ್ದು, ನನ್ನೊಂದಿಗೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಇಂದು ಪಕ್ಷ ಇಷ್ಟು ಗಟ್ಟಿಯಾಗಿ ನಿಲ್ಲಲು ಅವರು ಹೊಸಬರಿಗೆ ಅವಕಾಶ ನೀಡಲು ದಾರಿ ಮಾಡಿಕೊಟ್ಟಿದ್ದಾರೆ.
ಈ ಜಿಲ್ಲೆಯಲ್ಲಿ ಮೂರೂವರೆ ಲಕ್ಷ ಒಕ್ಕಲಿಗ ಸಮುದಾಯದವರಿದ್ದಾರೆ. ಅವರಿಗೂ ನ್ಯಾಯ ನೀಡಬೇಕು ಎಂದು ಭಾವಿಸಿದ್ದೆವು. ಆದರೆ ಯುವಕರಿಗೆ ಅವಕಾಶ ನೀಡಲು ಜಿಲ್ಲೆಯಲ್ಲಿ ನಾಲ್ಕು ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಯ ಎಲ್ಲಕಡೆ ಯುವಕರು ಸ್ಪರ್ಧಿಸುತ್ತಿದ್ದಾರೆ. ಪಕ್ಷ ತನ್ನದೇ ಆದ ಲೆಕ್ಕಾಚಾರ ಮಾಡಿ ಈ ತೀರ್ಮಾನ ಮಾಡಿದೆ.
ರಾಜ್ಯದಲ್ಲಿ ಮೇ 10ರಂದು ಕೇವಲ ಮತದಾನ ದಿನ ಮಾತ್ರವಲ್ಲ, ನಿಮ್ಮ ಭವಿಷ್ಯ ನೀವೇ ಬರೆದುಕೊಳ್ಲುವ ದಿನ, ಭ್ರಷ್ಟಾಚಾರ ಬಡಿದೋಡಿಸುವ ದಿನ. ನಾನು ಇಲ್ಲಿಗೆ ಬರುವಾಗ ಒಬ್ಬ ಶ್ರೇಷ್ಠ ಹಿರಿಯರು ಅವರ ಹೆಸರು ಹೇಳುವುದಿಲ್ಲ, ಅವರು ಈ ಜಿಲ್ಲೆಯಲ್ಲಿ ಅನೇಕ ಮಂಡಳಿಗಳಿದ್ದವು. ಅನೇಕರು ಈ ಮಂಡಳಿಗೆ ಅನುದಾನ ತಂದಿರುವುದಾಗಿ ಬೋರ್ಡ್ ಹಾಕಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ 40% ಕಮಿಷನ್ ನಿಂದ ಆ ಬೋರ್ಡ್ ನೋಡಿದವರೆಲ್ಲಾ 40% ಕಮಿಷನ್ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಪೀಠದ ಮುಖ್ಯಸ್ಥರು ಹೇಳಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಉದ್ದೇಶಧಿಂದ ನಾವು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಜೆಡಿಎಸ್ ಜತೆ ಸರ್ಕಾರ ಮಾಡಿದೆವು. ಆದರೆ ಅವರು ಅದನ್ನು ಉಲಿಸಿಕೊಳ್ಳಲಿಲ್ಲ. ನಂತರ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬಂದಿತು. ಈ ಸರ್ಕಾರ ಯುವಕರು, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಯಾವುದಾದರೂ ಒಂದು ವರ್ಗದ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಇವರಿಂದ ಸಮಾಧಾನಕರ ಆಡಳಿತ ಬಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಇಲ್ಲಿ ಬಿಜೆಪಿಯ ಮೂವರು ನಾಯಕರು ತಮ್ಮ ವಿರುದ್ಧ ಯಾವುದೇ ಸಿಡಿ ಬರಬಾರದು ಎಂದು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂಬ ವಿಚಾರ ನಮ್ಮ ಜಿಲ್ಲಾಧ್ಯಕ್ಷರು ತಿಳಿಸಿದರು. ಇಂತಹ ಪರಿಸ್ಥಿತಿ ಬಂದಿರುವುದೇಕೆ? ಬಿಜೆಪಿ ಇತಿಹಾಸ ಚರಿತ್ರೆ ದೊಡ್ಡದಿದೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಮೂವರು ತಡೆಯಾಜ್ಞೆ ತಂದಿದ್ದಾರೆ. ಹಿಂದೆ ಬಾಂಬೆ ಬಾಯ್ಸ್ 6-7 ಮಂದಿ ತಡೆಯಾಜ್ಞೆ ತಂದಿದ್ದು ಕೇಳಿದ್ದೆ. ದಕ್ಷಿಣ ಕನ್ನಡ ಜಿಲ್ಲೆಯ ನಾಯಕರು ಇಂದು ಕೋರ್ಟ್ ಮೊರೆ ಹೋಗಿದ್ದರೆ, ಬಿಜೆಪಿಯಲ್ಲಿ ಎಂತಹ ಹುಳುಕಿದೆ ಎಂದು ನೀವೆಲ್ಲರೂ ಆಲೋಚಿಸಬೇಕು.
ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದರೆ, ಅವರು ಭಾವನೆ ಬಗ್ಗೆ ಆಲೋಚಿಸಿದರೆ, ನಾವು ಬದುಕಿನ ಬಗ್ಗೆ ಆಲೋಚಿಸುತ್ತೇವೆ. ಇಂದು ಮಧ್ಯಮ ಸಂದರ್ಶನದ ವೇಳೆ ಈ ಭಾಗದ ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರವಾಗಿ ಕೆಲವು ಪ್ರಶ್ನೆ ಕೇಳಿದರು. ಬಿಜೆಪಿ ಸರ್ಕಾರ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬಂದಿದೆ ಎಂದು ಹೇಳಿದ್ದಾರೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಕೇವಲ 5 ಸಾವಿರ ಕೋಟಿ ಬಂಡವಾಳವನ್ನು ಈ ಭಾಗದಲ್ಲಿ ಹೂಡಿಕೆ ಮಾಡಲು ಯಾರೊಬ್ಬರೂ ಮುಂದೆ ಬಂದಿಲ್ಲ ಯಾಕೆ? ಎಂದು ಸವಾಲು ಹಾಕಿದ್ದೇನೆ.
ಮೋದಿ ಅವರು ಕಳೆದ ಚುನಾವಣೆಯಲ್ಲಿ ನೀವು ಮತಹಾಕುವಾಗ ನಿಮ್ಮ ಮನೆ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದು ಹೇಳಿದ್ದರು. ಈಗ ನಾವು ಏನು ಹೇಳಬೇಕು? ನಾನು ನಮ್ಮ ನಾಯಕರುಗಳಿಗೆ ಒಂದು ಸಲಹೆ ನೀಡುತ್ತೇನೆ. ನೀವು ಪ್ರತಿ ಬೂತ್ ಮುಂದೆ ಸಿಲಿಂಡರ್ ಇಟ್ಟು ಅದಕ್ಕೆ ಒಂದು ಹೂವಿನ ಹಾರ ಹಾಕಬೇಕು. ಜನರ ಆದಾಯ ಪಾತಾಳಕ್ಕೆ ಕುಸಿದಿದ್ದು, ಬೆಲೆಗಳು ಗಗನಕ್ಕೇರಿವೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಸಹಾಯ ಮಾಡಲು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿವೆ.
ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು. ಆಮೂಲಕ ಪ್ರತಿ ಮನೆಗೆ ಸುಮಾರು 1500 ರೂ. ಉಳಿತಾಯವಾಗಲಿದೆ. ನಾನು ಇಂಧನ ಸಚಿವನಾಗಿದ್ದೆ. ಈ ಭಾಗದಲ್ಲಿ 200 ಕುಟುಂಬ ಹೊರತಾಗಿ ಉಳಿದವರು ಯಾರೂ ಕರೆಂಟ್ ಬಿಲ್ ಕಟ್ಟುವಂತಿಲ್ಲ. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ಇನ್ನು ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬಗಳ ಪ್ರತಿ ಸದಸ್ಯನಿಗೆ ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಇನ್ನು ನಿರುದ್ಯೋಗ ಯುವಕರಿಗಾಗಿ ಪದವೀಧರರಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಈ ಎಲ್ಲಾ ಘೋಷಣೆಗಳ ಗ್ಯಾರಂಟಿ ಕಾರ್ಡ್ ಗಳನ್ನು ನೀವು ಪ್ರತಿ ಮನೆ ಮನೆಗೆ ತಲುಪಿಸಿ. ಮೇ 13ರಂದು ಫಲಿತಾಂಶ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲಾಗುವುದು.
ಖಾಸಗಿಯವರು ಉದ್ಯೋಗಸ್ಥರನ್ನು ತೆಗೆದುಕೊಳ್ಳುವಾಗ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಖಾಸಗಿಯಲ್ಲಿ ಉದ್ಯೋಗ ವಿನಿಮಯ ವ್ಯವಸ್ಥೆ ಬರಬೇಕು ಎಂಬ ಸಲಹೆಯನ್ನು ಯುವಕನೊಬ್ಬ ನೀಡಿದ್ದು, ಈ ಕುರಿತ ಭರವಸೆಯನ್ನು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ತಿಳಿಸಲಿದೆ. ಯುವಕರ ಬಗ್ಗೆ ಚಿಂತನೆ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ, ರೈತರ ವಿಚಾರವಾಗಿ ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ.
ಈ ಭಾಗದಲ್ಲಿ ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ. ಕಾಂಗ್ರೆಸ್ ಸರ್ಕಾರ ಈ ಹಿಂದೆ ಅರಣ್ಯ ಭೂಮಿ ಹಾಗೂ ವಾಣಿಜ್ಯ ಭೂಮಿಯನ್ನು ಒಥ್ತುವರಿ ಮಾಡಿಕೊಂಡಿದ್ದರೆ, ಅವರಿಗೆ ತೊಂದರೆ ಆಗಬಾರದು ಎಂದು ಸಕ್ರಮ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ಬಗ್ಗೆ ಕಾನೂನು ಮಾಡಿ ಈ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಈ ದೇಶದಲ್ಲಿ ಉಳುವವನಿಗೆ ಭೂಮಿ, ಬಡವರಿಗೆ ನಿವೇಶನ ನೀಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಭಾಗದ ನಿಮ್ಮ ಜಮೀನನ್ನು ಸಕ್ರಮ ಮಾಡುತ್ತೇವೆ.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿವೆ. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಅನೇಕರು ಆತ್ಮಹತ್ಯೆ ಮಾಡಿಕೊಂಡರು. ಬಿಜೆಪಿ ನಾಯಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಕೆಲವರು ಲಂಚಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೆ ಕೆಲವರು ಮಂಚಕ್ಕೆ ರಾಜೀನಾಮೆ ಕೊಟ್ಟರು. ಶಿವಮೊಗ್ಗದಲ್ಲಿ ದ್ವೇಷ ರಾಜಕೀಯವನ್ನು ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಅವರೇ ಟೀಕಿಸಿದ್ದರು.
ಇನ್ನು ಬಿಜೆಪಿಯವರು ರಾಜ್ಯದ ನಂದಿನಿ ಹಾಲನ್ನು ಬಿಟ್ಟು ಗುಜರಾತಿನ ಹಾಲು ಖರೀದಿ ಮಾಡಿ ಎಂದು ಹೇಳುತ್ತಿದ್ದಾರೆ. ನಮ್ಮ ರೈತರು ಸರಿಯಾದ ಬೆಲೆ ಸಿಗದೇ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಂದಿನಿ ಮೇಲೆ ಅಮೂಲ್ ಹೇರಿಕೆ ಮಾಡಲಾಗುತ್ತಿದೆ. ನಮ್ಮ ಹಾಲು ಉತ್ಪಾದಕರನ್ನು ಬೊಮ್ಮಾಯಿ ಅವರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಕೋವಿಡ್ ಸಮಯದಲ್ಲಿ ಭ್ರಷ್ಟಾಚಾರ ತಾಂಡವವಾಡಿತ್ತು. ಆಕ್ಸಿಜನ್ ಇಲ್ಲದೆ ಅನೇಕರು ಸತ್ತರು. ಸತ್ತವರಿಗೆ ಸರ್ಕಾರ ಪರಿಹಾರ ನೀಡಲಿಲ್ಲ. ನಷ್ಟ ಅನಭವಿಸಿದ ವ್ಯಾಪಾರಸ್ಥರಿಗೆ ತೆರಿಗೆ ವಿನಾಯ್ತಿ ನೀಡಲಿಲ್ಲ. ಜನರಿಗೆ ಸಹಾಯ ಮಾಡದ ಸರ್ಕಾರ ಯಾಕೆ ಬೇಕು?
ಬೆಂಗಳೂರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಮುಂದಾದಾಗ ಮೂರು ಪಟ್ಟು ಟಿಕೆಟ್ ದರ ನಿಗದಿ ಮಾಡಿ ಅವರನ್ನು ಸುಲಿಗೆ ಮಾಡಿದರು. ಆ ಪರಿಸ್ಥಿತಿಯಲ್ಲಿ ಅವರ ಪರವಾಗಿ ನಾನು ನಮ್ಮ ಪಕ್ಷ ಹಣ ನೀಡಲು ಮುಂದಾದಾಗ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿತು. ನನ್ನ ಈ ತೀರ್ಮಾನ ನೋಡಿ ರಾಷ್ಟ್ರ ಮಟ್ಟದಲ್ಲಿ ಈ ತೀರ್ಮಾನ ಮಾಡಬೇಕಾಯಿತು.
ಈ ಎಲ್ಲಾ ಅನಾಚಾರಗಳಿಂದ ಬಿಜೆಪಿಯ ಆಣೆಕಟ್ಟು ಒಡೆದುಹೋಗಿವೆ. 30 ವರ್ಷಗಳ ಕಾಲ ಬಿಜೆಪಿಯಲ್ಲಿ ಶಾಸಕರಾಗಿ, ಮುಖ್ಯಮಂತ್ರಿಗಳಾಗಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಗಳಾಗಿದ್ದರು, ಪರಿಷತ್ ಸದಸ್ಯರಾದ ಪುಟ್ಟಣ್ಣ 4 ವರ್ಷ ಅಧಿಕಾರ ಇದ್ದರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಹಾಲಿ ಬಿಜೆಪಿಯ ಒಂದು ಡಜನ್ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆದರೆ ನಮ್ಮ ಪಕ್ಷದಲ್ಲಿ ಅವರಿಗೆ ಸ್ಥಾನಮಾನ ನೀಡುವ ಅವಕಾಶವಿಲ್ಲ ಎಂಬ ಕಾರಣಕ್ಕೆ ಕೆಲವರನ್ನು ಮಾತ್ರ ಕರೆದುಕೊಳ್ಳಲಾಗಿದೆ. ಅಂತಹ ನಾಯಕರುಗಳಿಗೆ ಬಿಜೆಪಿ ಬೇಡವಾಗಿದೆ.
ನೀವು ಇನ್ನು ಪ್ರತಿ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಬೇಕು. ಕಾಂಗ್ರೆಸ್ ಮನೆ ಬಾಗಿಲು ನಿಮಗಾಗಿ ತೆರೆದಿದೆ. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ 150ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ನೀವೆಲ್ಲರೂ ಈ ಜಿಲ್ಲೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ.
[22/04, 6:50 PM] Kpcc official: Shri Rahul Gandhi former MP’s visit to Karnataka on 23rd April 2023.
23rd April 2023
08:00- 10:30 Delhi - Hubli by flight
10:50- 11:40 Hubli - Kudala Sangama by Helicopter
11:50- 12:10 Darshan @Sangamanatha Temple & The Aikya Linga
12:15 - 13:30 Participate in Basava Jayanti celebration organised by Utsava Samithi @ Basava Mandapa
13:40- 14:10 Prasada @ Kudala Sangama dasoha bhavan
17:00- 18:30 Jana Samparka and public address @Vijayapura Shivaji Circle to Kanakadasa Circle
24th April 2023
14:00- 15:00Interaction with Sugarcane farmers @ Ramdurg, Belagavi
15:30- 16:30 Gadag : Yuva Samvaad
17:10- 18:30 Public Meeting @Hangal
20:15- 22:45 Hubli - Delhi by aircraft
[22/04, 7:43 PM] Kpcc official: *Shri Jairam Ramesh on Twitter*
The unity in Karnataka Congress today is unparalleled…
The seeds of which were sown during #BharatJodoYatra in Karnataka. Watch @RahulGandhi asking @DKShivakumar what @siddaramaiah’s greatest strength is and @siddaramaiah talking about @DKShivakumar’s greatest strength.
https://twitter.com/Jairam_Ramesh/status/1649763479748857856?s=20
Post a Comment