ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ....... ಮುಂದಿನ ವಾರ ವಿಪಕ್ಷ ನಾಯಕನ ಆಯ್ಕೆ: ನಳಿನ್‍ಕುಮಾರ್ ಕಟೀಲ್


 
ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ
ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯÀ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ ಮಾಡಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಬೆದರಿಸಿದ್ದರು. ವಿರೋಧ ಪಕ್ಷದ ನಾಯಕ ಸ್ಥಾನ ಸಿಗದೆ ಇದ್ದರೆ ನನ್ನ ದಾರಿ ನನಗೆ ಎಂದು ಬೆದರಿಕೆ ಹಾಕಿದ್ದರು ಎಂದು ವಿವರಿಸಿದರು.
2009ರಲ್ಲಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾದರು. ಬಳಿಕ 2013ರಲ್ಲಿ ಮುಖ್ಯಮಂತ್ರಿಯಾದರು. ಸಣ್ಣ ಅವಧಿ ಬಳಿಕ ಮತ್ತೆ ಇಲ್ಲಿನವರೆಗೆ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ಕೊಟ್ಟಿದ್ದಕ್ಕಿಂತ ಪಡೆದುದೇ ಹೆಚ್ಚು ಎಂದು ತಿಳಿಸಿದರು.
ಈಗ ಕಾಂಗ್ರೆಸ್ ಹೈಕಮಾಂಡ್ ಅಸಮರ್ಥ ಸ್ಥಿತಿಯಲ್ಲಿದೆ. ಸಮರ್ಥ ಹೈಕಮಾಂಡ್ ಇದ್ದರೆ ಇಷ್ಟು ಜನರ ಜೊತೆ ಮಾತುಕತೆ ಆಗುತ್ತಿರಲಿಲ್ಲ. ಹಿಂದೆ ಒಂದೇ ತೀರ್ಮಾನ ಇರುತ್ತಿತ್ತು. ಲಕೋಟೆ ಕಳಿಸುವ ನಾಯಕತ್ವ ಇತ್ತು ಎಂದರು.
ಸುರ್ಜೇವಾಲಾ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ. ನಾಳೆ ಮಧ್ಯಾಹ್ನ 3.30ಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಇದೆ ಎಂದಿದ್ದರು. ನೀವು ಯಾರನ್ನಾದರೂ ಸಿಎಂ ಮಾಡಿ. ಇದು ನಮ್ಮ ಒತ್ತಾಯ. ಜನರು ಆಶ್ವಾಸನೆ ಈಡೇರಿಸುವ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಭರವಸೆ ಕಾರಣ ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಎಲ್ಲ ಕಡೆ ಜನತೆ ಹೇಳುತ್ತಿದ್ದಾರೆ. ಯಾವಾಗದಿಂದ ಬಸ್‍ನಲ್ಲಿ ಉಚಿತ ಪ್ರಯಾಣ ಎಂದು ಹೆಣ್ಮಕ್ಕಳೂ ಕಾಯುತ್ತಿದ್ದಾರೆ. ಅವರೂ ಟಿಕೆಟ್ ಪಡೆಯದೆ ಓಡಾಡುವ ಸ್ಥಿತಿ ಬರಬಹುದು ಎಂದು ತಿಳಿಸಿದರು.
ದಲಿತರು ತಮಗೂ ಅವಕಾಶ ಕೊಡಿ ಎಂದು ಕಾಂಗ್ರೆಸ್ ಕಚೇರಿ ಮುಂದೆ ಹೋರಾಟ ಮಾಡುತ್ತಿದ್ದಾರೆ. ನಾಳೆಯಿಂದ ಅವರ ಹೋರಾಟ ತೀವ್ರಗೊಳ್ಳಲಿದೆ ಎಂದು ಗೊತ್ತಾಗಿದೆ. ಈ ಬಾರಿ ಸಿಎಂ ಸ್ಥಾನ ಸಿಗಲೇಬೇಕು ಎಂದು ಡಿ.ಕೆ.ಶಿವಕುಮಾರ್ - ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ಸಿಗೆ ಹೋದ ಸಿದ್ದರಾಮಯ್ಯ, 2009ರಿಂದ ಇವತ್ತಿನವರೆಗೂ ಅಧಿಕಾರದಲ್ಲಿದ್ದಾರೆ ಎಂದರು.
ರಾಜ್ಯದ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸುಳ್ಳು ಆಶ್ವಾಸನೆಗಳನ್ನು ಕೊಟ್ಟರೂ ಜನರು ಅವರಿಗೆ ಸ್ಪಷ್ಟ ಬಹುಮತ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ವಿಚಾರದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಸ್ಪಷ್ಟ ಬಹುಮತ ಕೊಟ್ಟ ಜನತೆ ಕಾಯುತ್ತ ಕುಳಿತಿದ್ದಾರೆ. ಅವರ ತಾಳ್ಮೆ ಮೀರುತ್ತಿದೆ. ಇಂಥ ಸಂದರ್ಭದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆದರೆ, ಚುನಾವಣಾ ನೇತೃತ್ವ ವಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುಳ್ಳುಗಳ ಸರದಾರ ಎನಿಸಿದ ಸುರ್ಜೇವಾಲಾ ನಮ್ಮ ಪಕ್ಷದ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ನಾಯಕರು ದೆಹಲಿಯಲ್ಲಿ ಕುಳಿತಿದ್ದಾರೆ. ಜನತೆ ಶಾಸಕರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರಿಗೆ ಸಮಸ್ಯೆಯಾಗಿದೆ ಎಂದು ತಿಳಿಸಿದರು.

 (ಕರುಣಾಕರ 

ಮುಂದಿನ ವಾರ ವಿಪಕ್ಷ ನಾಯಕನ ಆಯ್ಕೆ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಯಾರೆಂದು ಪ್ರಕಟಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಅವರು ಬಿಜೆಪಿ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಯಾರನ್ನಾದರೂ ಸಿಎಂ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.
ಮುಂದಿನ ವಾರ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಒಂದು ವಾರ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು, ಜನರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದ ಅವರು, ಕಾಂಗ್ರೆಸ್ ಸಿಎಂ ಆಯ್ಕೆ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.
ಜನತೆ ವಿದ್ಯುತ್ ಬಿಲ್ ಕಟ್ಟಬಾರದು. ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಗಲಾಟೆ ಮಾಡುವುದು ಸಹಜ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ತಮ್ಮ ಸರಕಾರ ಬಂದ ಬಳಿಕ ವಿದ್ಯುತ್ ಬಿಲ್ ಕಟ್ಟದಿರಲು ಹೇಳಿದ್ದರು ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.


 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Post a Comment

Previous Post Next Post