[06/05, 7:07 PM] Kpcc official: *ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು*
ಕರ್ನಾಟಕ ರಾಜ್ಯದ ಪಾಲಿಗೆ ಇದು ಅತ್ಯಂತ ಮಹತ್ವದ ಕಾಲಘಟ್ಟ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಭವಿಷ್ಯದ ದಿಕ್ಕು ತೀರ್ಮಾನವಾಗುತ್ತದೆ. ಹೀಗಾಗಿ ರಾಜ್ಯದ ಮತದಾರರು ಬಹಳ ಆಲೋಚನೆ ಮಾಡಿ, ಜಾಗೃತರಾಗಿ ನೀವು ರಾಜ್ಯದಲ್ಲಿ ಅಭಿವೃದ್ಧಿ ಆಗಬೇಕಾದರೆ ರಾಜಕೀಯ ಸ್ಥಿರತೆ ಕಾಯ್ದುಕೊಳ್ಳುವ ಸರ್ಕಾರ ತರಬೇಕು.
2008ರಿಂದ 2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ರಾಜ್ಯ ಮೂವರು ಮುಖ್ಯಮಂತ್ರಿಗಳನ್ನು ಕಂಡಿತ್ತು. ರಾಜಕೀಯ ಅಸ್ಥಿರತೆ ಇಲ್ಲದೆ ಅಭಿವೃದ್ಧಿ ಕಾಣಲು ಸಾಧ್ಯವಾಗಲಿಲ್ಲ. 2019ರಿಂದ ಇಲ್ಲಿಯವರೆಗೂ ನಾಲ್ಕು ವರ್ಷಗಳ ಕಾಲ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇಬ್ಬರು ಮುಖ್ಯಮಂತ್ರಿಗಳನ್ನು ಕಂಡಿದ್ದು, ರಾಜಕೀಯ ಅಸ್ಥಿರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ಕಾಂಗ್ರೆಸ್ 2013ರಿಂದ 2018ರ ವರೆಗೆ ಕೇವಲ ಓರ್ವ ಮುಖ್ಯಮಂತ್ರಿ ಹೊಂದಿದ್ದು, ರಾಜಕೀಯ ಸ್ಥಿರತೆ ಮೂಲಕ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. ಹೀಗಾಗಿ ರಾಜ್ಯದ ಜನರು ಈ ಸಂದರ್ಭದಲ್ಲಿ ರಾಜಕೀಯ ಸ್ಥಿರತೆಗೆ ಮತ ಹಾಕುತ್ತಾರೋ ಅಥವಾ ರಾಜಕೀಯ ಅಸ್ಥಿರತೆಗೆ ಮತ ಹಾಕುತ್ತಾರೋ ಅವರೇ ತೀರ್ಮಾನಿಸಬೇಕು.
ಕರ್ನಾಟಕ ದೇಶದ ಅತ್ಯಂತ ಅಭಿವೃದ್ಧಿ, ಪ್ರಗತಿ ಹೊಂದಿರುವ ರಾಜ್ಯ. ಈ ರಾಜ್ಯ ನಮ್ಮ ಹೆಮ್ಮೆಯಾಗಿದೆ. ಇದು ದೇಶದ ಸಿಲಿಕಾನ್ ವ್ಯಾಲಿ ಆಗಿದೆ. ಬೆಂಗಳೂರು ಅಮೆರಿಕದ ಸಿಲಿಕಾನ್ ವ್ಯಾಲಿ ಆಗಿ ರೂಪುಗೊಳ್ಳಬೇಕು. ಇದಕ್ಕೆ ರಾಜಕೀಯ ಸ್ಥಿತರತೆ ಬೇಕು. ಆದರೆ ಸದ್ಯ ರಾಜಕೀಯ ಅಸ್ಥಿರತೆಯಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ ಹೆಚ್ಚಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಇನ್ನು ದೇಶದ ಜನರ ಆಸ್ತಿ ಕೆಲವರ ಪಾಲಾಗುತ್ತಿದೆ. ಈ ಮಧ್ಯೆ ದೇಶದಲ್ಲಿ ಭಾರತೀಯರ ನಡುವೆ ದ್ವೇಷ ಹೆಚ್ಚುತ್ತಿದೆ. ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಯುತ್ತಿದ್ದು, ಸಮಾಜದಲ್ಲಿ ಶಾಂತಿ, ಪ್ರೀತಿ, ಸೌಹಾರ್ದತೆ ಪುನರ್ ಸ್ಥಾಪಿಸಬೇಕಿದೆ. ಈ ದ್ವೇಷವನ್ನು ಹೇಗೆ ತೊಗಲಾಡಿಸಬೇಕು ಎಂಬುದು ಪ್ರಮುಖ ವಿಚಾರವಾಗಿದೆ.
ಬಾಬು ಜಗಜೀವನ್ ರಾಮ್ ಅವರು ಈ ರಾಜ್ಯದ ಮೇಲೆ ವಿಶೇಷ ಪ್ರೀತಿ ಹೊಂದಿದ್ದರು. ರಾಜ್ಯದ ಜನ ಕೂಡ ಅವರ ಮೇಲೆ ಬಹಳ ಪ್ರೀತಿ ತೋರಿದ್ದಾರೆ. ಹೀಗಾಗಿ ನಾವು ಕರ್ನಾಟಕದ ಜತೆ ಬಹಳ ಉತ್ತಮ ಬಾಂದವ್ಯ ಹೊಂದಿದ್ದೇವೆ. ಇದೇ ಕಾರಣಕ್ಕೆ ನನ್ನ ತಂದೆಯ ಅನೇಕ ಪ್ರತಿಮೆಗಳನ್ನು ರಾಜ್ಯದಲ್ಲಿ ನೋಡುತ್ತೇನೆ.
ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ನನ್ನನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮಾಡಿದ್ದರು. ನಾನು ರಾಜ್ಯದ ಪ್ರತಿ ಮೂಲೆ ಮೂಲೆ ಪ್ರವಾಸ ಮಾಡಿದ್ದೆ. ಎಲ್ಲ ವರ್ಗದ ಜನರನ್ನು ಭೇಟಿ ಮಾಡಿದ್ದೆ. ನನಗೆ ವರ ಕಷ್ಟಗಳ ಬಗ್ಗೆ ಅರಿವಿದೆ. ಏನೂ ಇಲ್ಲದವರ ಬಳಿಯೂ ಅವರದೇ ಆದ ಕನಸುಗಳು ಇರುತ್ತವೆ. ಕಾಂಗ್ರೆಸ್ ಪಕ್ಷ ಇವರ ಕನಸು ನನಸಾಗಿಸಲು ಪ್ರಯತ್ನಿಸುತ್ತದೆ. ಖರ್ಗೆ ಅವರು ನಮ್ಮ ಅಧ್ಯಕ್ಷರಾಗಿದ್ದು, ಇವರ ಜತೆಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ನಾಯಕರು ರಾಜ್ಯಕ್ಕೆ ಉತ್ತಮ ಯೋಜನೆಗಳನ್ನು ನೀಡಿದ್ದು, ಈ ಯೋಜನೆಗಳು ರಾಜ್ಯದ ಎಲ್ಲಾ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರವಾಗಲಿವೆ. ಈ ಯೋಜನೆಗಳು ಕೇವಲ ಭರವಸೆಯಾಗಿಲ್ಲ, ಇವುಗಳು ಗ್ಯಾರಂಟಿಗಳಾಗಿವೆ. ಈ ಐದು ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗವನ್ನು ತಲುಪಲಿವೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಇನ್ನು ಯುವನಿಧಿ ಕಾರ್ಯಕ್ರಮದ ಮೂಲಕ ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು 2 ವರ್ಷದವರೆಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ಇನ್ನು ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುವುದು.
ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತ ಬಗ್ಗೆ ವಿಶೇಷ ಕಾಳಜಿ ಹೊಂದಿದೆ. ನಾವು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಜತೆಗೆ ಮೀಸಲಾತಿ ಮಿತಿಯನ್ನು ಶೇ.50 ನಿಂದ ಶೇ.75ಕ್ಕೆ ಏರಿಕೆ ಮಾಡಿ ಪರಿಶಿಷ್ಟ ಜಾತಿ, ಪಂಗಡ, ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುತ್ತೇವೆ. ಸದಾಶಿವ ಆಯೋಗದ ವರದಿ ಮಂಡನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದೆಲ್ಲದರ ಜತೆಗೆ ಇನ್ನು ಅನೇಕ ನೂರಾರು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ.
ಕಾಂಗ್ರೆಸ್ ಪಕ್ಷ ಸಕಾರಾತ್ಮಕ ಅಂಶಗಳ ಮೇಲೆ ಚುನಾವಣೆ ಎದುರಿಸುತ್ತಿದೆ. ರಾಜ್ಯದ ಅಭಿವೃದ್ಧಿಯ ಗತವೈಭವವನ್ನು ಮತ್ತೇ ಸ್ಥಾಪಿಸಲು ಕಾಂಗ್ರೆಸ್ ಕೆಲಸ ಮಾಡಲಿದೆ.
*ಪ್ರಶ್ನೋತ್ತರ:*
ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿಎಫ್ಐ ಮನಸ್ಥಿತಿ ಮತ್ತೆ ಅಧಿಕಾರಕ್ಕೆ ಬಂದಂತಾಗುತ್ತದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮಗಳು ಕಾಳಿದಾಗ ಉತ್ತರಿಸಿದ ಎಐಸಿಸಿ ವಕ್ತಾರ ಗೌರವ್ ವಲ್ಲಭ್, ‘ಇದೇ ನಮಗೂ ಹಾಗೂ ಬಿಜೆಪಿಗೂ ಇರುವ ವ್ಯಾತ್ಯಾಸ. ನಾವು ಈ ಚುನಾವಣೆ ಸಮಯದಲ್ಲಿ ರಾಜ್ಯದ ಭವಿಷ್ಯದ ಬಗ್ಗೆ ಆಲೋಚಿಸುತ್ತಿದ್ದರೆ, ನಾವು ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಗ್ಯಾರಂಟಿ ಯೋಜನೆ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ನಾವು ರಾಜ್ಯವನ್ನು ಏಷ್ಯಾದ ಸಿಲಿಕಾನ್ ವ್ಯಾಲಿ ಆಗಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಆಲೋಚಿಸುತ್ತಿದ್ದೇವೆ. ಆದರೆ ಬಿಜೆಪಿಯ ಸುಳ್ಳಿನ ಸರದಾರ ಅಸ್ಸಾಂ ಮುಖ್ಯಮಂತ್ರಿಗಳು ನಮ್ಮ ನಾಯಕರ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಾರೆ. ಅವರು ತಮ್ಮ ಹೇಳಿಕೆ ಮೂಲಕ ಕೇವಲ ಡಿ.ಕೆ. ಶಿವಕುಮಾರ್ ಅವರನ್ನು ಮಾತ್ರವಲ್ಲ ಇಡೀ ಒಕ್ಕಲಿಗ ಸಮುದಾಯವನ್ನೇ ಅಪಮಾನ ಮಾಡಿದ್ದಾರೆ. ಈ ಎಲ್ಲಾ ಒಕ್ಕಲಿಗರು ಅವರಿಗೆ ಮೇ 10ರಂದು ಉತ್ತರ ನೀಡುತ್ತಾರೆ. ಅವರು ಇನ್ನೂ ಭೂತಕಾಲದಲ್ಲಿದ್ದು, ಕಾಂಗ್ರೆಸ್ ಪಕ್ಷ ವರ್ತಮಾನದಲ್ಲಿ ಜೀವಿಸುತ್ತಾ ಭವಿಷ್ಯದ ಬಗ್ಗೆ ಆಲೋಚಿಸುತ್ತಿದೆ. ನಾವು ನಮ್ಮ ಕೊಡುಗೆಗಳ ಬಗ್ಗೆ ಮಾತನಾಡಿದರೆ ಬಿಜೆಪಿ ಸಮಾಜ ಒಡೆಯುವುದರ ಬಗ್ಗೆ ಮಾತನಾಡುತ್ತಾರೆ. ನಾವು ಉದ್ಯೋಗದ ಬಗ್ಗೆ ಮಾತನಾಡಿದರೆ ಬಿಜೆಪಿ ವಿಭಜನೆಯ ಬಗ್ಗೆ ಮಾತನಾಡುತ್ತಾರೆ. ನಾವು ಪ್ರಗತಿ ಬಗ್ಗೆ ಮಾತನಾಡಿದರೆ ಅವರು ದ್ವೇಷದ ಬಗ್ಗೆ ಮಾತನಾಡುತ್ತಾರೆ. ಇದು ನಮಗೂ ಹಾಗೂ ಬಿಜೆಪಿಗೂ ಇರುವ ಸೈದ್ಧಾಂತಿಕ ವ್ಯತ್ಯಾಸ. ಅಸ್ಸಾಂ ಸಿಎಂ ವಿರುದ್ಧ ಅವರದೇ ನಾಯಕರಾದ ಮೋದಿ ಅವರು ಆತನನ್ನು ಅತ್ಯಂತ ಭ್ರಷ್ಟ ವ್ಯಕ್ತಿ ಎಂದು ಕರೆಯುತ್ತಿದ್ದರು. ಶಾರದಾ ಹಗರಣ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಮೋದಿ ಅವರ ಬಗ್ಗೆ ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಲಿ. ಅವರು ಏನಾದರೂ ಹೇಳಿಕೊಳ್ಳಲಿ ನಾವು ರಾಜ್ಯದ ಪ್ರಗತಿ ಬಗ್ಗೆ ಹಾಗೂ ಬಿಜೆಪಿಯ 1.50 ಲಕ್ಷ ಕೋಟಿ ಲೂಟಿ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಸರ್ಕಾರದಲ್ಲಿ ಸರ್ಕಾರದ ಪ್ರತಿ ಹುದ್ದೆಗೂ ದರ ನಿಗದಿಯಾಗಿದೆ. ಇವರ ಸರ್ಕಾರದಲ್ಲಿ ಹಣ ಕೊಡಿ ಹುದ್ದೆ ತಗೊಳ್ಳಿ ಎನ್ನುವ ಹಂತಕ್ಕೆ ಬಂದು ನಿಂತಿದೆ. ಕಳೆದ ನಾಲ್ಕು ವರ್ಷಗಳ ದುರಾಡಳಿತದಲ್ಲಿ ಬಿಜೆಪಿ ಇದನ್ನೇ ಮಾಡಿಕೊಂಡು ಬಂದಿದೆ’ ಎಂದು ಹರಿಹಾಯ್ದರು.
[06/05, 7:40 PM] Kpcc official: *ಹುಬ್ಬಳ್ಳಿಯ ಸಾರ್ವಜನಿಕ ಸಮಾವೇಶದಲ್ಲಿ ಸೋನಿಯಾ ಗಾಂಧಿ ಅವರ ಮಾತುಗಳು*
ರಾಜ್ಯ ಬದಲಾವಣೆಯಾಗುವ ದಿನ ಹತ್ತಿರದಲ್ಲಿದೆ. ಈ ಪ್ರದೇಶದ ಜನ ಪ್ರತಿ ಕ್ಷೆತ್ರದಲ್ಲಿ ತಮ್ಮ ಪರಿಶ್ರಮದಿಂದ ಈ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದೀರಿ. ಕಲಾ ಕ್ಷೇತ್ರದಿಂದ ಐಟಿ ಬಿಟಿ ಕ್ಷೇತ್ರದವರೆಗೆ, ಹಾಲು ಉತ್ಪಾದನೆ, ಕೃಷಿ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನಿಮ್ಮ ರಾಜ್ಯದ ಹೆಸರನ್ನು ಉಜ್ವಲಗೊಳಿಸಿದ್ದೀರಿ.
ಕಾಂಗ್ರೆಸ್ ಇಸಿಹಾಸದಲ್ಲಿ ಕರ್ನಾಟಕ ರಾಜ್ಯಕ್ಕೆ ವಿಶೇಷ ಸ್ಥಾನವಿದೆ. ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ. ಇಂದಿರಾ ಗಾಂಧಿ ಅವರು ಕೇಂದ್ರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡಿದ್ದರು. ಆಗ ಚಿಕ್ಕಮಗಳೂರಿನ ಜನ ಅವರ ಬೆಂಬಲಕ್ಕೆ ನಿಂತಿದ್ದರು. 25 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಬಳ್ಳಾರಿಯ ಜನ ನನ್ನನ್ನು ಬೆಂಬಲಿಸಿದ್ದರು. ಈ ಕತ್ತಲ ಸಮಯದಲ್ಲಿ ನಾವು ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ.
ಸಮಾಜದಲ್ಲಿ ದ್ವೇಷ ಪಸರಿಸುತ್ತಿರುವವರ ವಿರುದ್ಧ ಹೋರಾಡಲು ಭಾರತ ಜೋಡೋ ಯಾತ್ರೆ ಮಾಡಲಾಯಿತು. ಬಿಜೆಪಿಯ ಈ ದ್ವೋಷ ರಾಜಕೀಯದಿಂದ ದೇಶವನ್ನು ಮುಕ್ತಿಗೊಳಿಸುವ ಹೊರತಾಗಿ ಕರ್ನಾಟಕ ಹಾಗೂ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಲಕ್ಷಾಂತರ ಜನ ರಾಹುಲ್ ಗಾಂಧಿ ಅವರ ಜತೆ 4 ಸಾವಿರ ಕಿ.ಮೀ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಯಾತ್ರೆಯಲ್ಲಿ ಬಿಜೆಪಿಗೆ ಎಷ್ಟು ಭಯವಾಗಿದೆ ಎಂದರೆ, ಅವರು ಎಲ್ಲ ರೀತಿಯ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇಂದು ಅಧಿಕಾರದಲ್ಲಿರುವವರು ಜನರ ರಕ್ಷಣೆ ಮಾಡುವ ಬದಲು ಹಣ ಮಾಡಿಕೊಳ್ಳುತ್ತಿದ್ದಾರೆ.
2018ರಲ್ಲಿ ನೀವು ಬಿಜೆಪಿಗೆ ಅಧಿಕಾರ ನೀಡಲಿಲ್ಲ. ಆದರೂ ಇವರು ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದಿದ್ದರು. ನಂತರ ಅವರ 40% ಸರ್ಕಾರ ನಿಮ್ಮನ್ನು ಲೂಟಿ ಮಾಡಿದೆ. ಬಿಜೆಪಿ ನಾಯಕರು ಎಷ್ಟು ಅಹಂಕಾರದಲ್ಲಿದ್ದಾರೆ ಎಂದರೆ ಅವರು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಯಾವುದೇ ಪತ್ರಕ್ಕೂ ಉತ್ತರ ನೀಡುತ್ತಿಲ್ಲ. ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಿಯಂತ್ರಿಸುತ್ತಿದ್ದಾರೆ. ಯಾವುದೇ ಸರ್ಕಾರದಲ್ಲಿ ಇಂತಹ ದುರಾಡಳಿತವನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾತಂತ್ರ ವ್ಯವಸ್ಥೆ ನಡೆಯುವುದು ಹೀಗೆಯೇ? ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಹಿರಂಗವಾಗಿ ಧಮಕಿ ಹಾಕುತ್ತಿದ್ದಾರೆ. ಬಿಜೆಪಿ ಸೋತರೆ ರಾಜ್ಯದಲ್ಲಿ ಗಲಭೆಯಾಗುತ್ತದೆ ಎಂದು ಹೇಳುತ್ತಾರೆ.
ನಿಮ್ಮ ಪರವಾಗಿ ನಾನು ಅವರಿಗೆ ಒಂದು ಮಾತು ಹೇಳಬಯಸುತ್ತೇನೆ. ನೀವು ಕರ್ನಾಟಕ ರಾಜ್ಯದ ಜನರನ್ನು ಇಷ್ಟು ದಡ್ಡರೆಂದು ಭಾವಿಸಬೇಡಿ. ಕರ್ನಾಟಕದ ಜನ ತಮ್ಮ ಪರಿಶ್ರಮ ಹಾಗೂ ಸಂಕಲ್ಪದ ಮೇಲೆ ಭರವಸೆ ಇಟ್ಟಿದ್ದಾರೆ ಹೊರತು ಬೇರೆ ಯಾರ ಆಶೀರ್ವಾದದಿಂದಲೂ ಅಲ್ಲ. ಕರ್ನಾಟಕದ ಜನ ದುರಾಸೆ ಇರುವವರಲ್ಲ, ನಿಮ್ಮ ಬೆದರಿಕೆಗಳಿಗೆ ಹೆದರುವವರೂ ಅಲ್ಲ. ಕರ್ನಾಟಕದ ಜನ ಮೇ 10 ರಂದು ನಿಮಗೆ ಈ ಮಣ್ಣಿನ ಶಕ್ತಿ ಏನು ಎಂದು ತಿಳಿಸಲಿದ್ದಾರೆ.
ಇಂದು ಲಕ್ಷಾಂತರ ರೈತರು ಹಾಗೂ ಹಾಲು ಉತ್ಪಾದಕರನ್ನು ಕತ್ತಲೆಗೆ ದೂಡಲು ನಂದಿನಿಯಂತಹ ಅತ್ಯುತ್ತಮ ಸಂಸ್ಥೆಯನ್ನು ನಾಶ ಮಾಡಲು ಷಡ್ಯಂತ್ರ ರೂಪಿಸಿದ್ದಾರೆ. ಇದು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ. ಜನರ ಆಶೀರ್ವಾದದಿಂದ ನಾಯಕರಾಗುತ್ತಾರೆಯೇ ಹೊರತು, ಯಾವುದೇ ನಾಯಕರ ಆಶೀರ್ವಾದದಿಂದ ಈ ರಾಜ್ಯದ ಜನರ ಭವಿಷ್ಯ ನಿರ್ಧಾರವಾಗುವುದಿಲ್ಲ ಎಂದು ಈ ಸಮಯದಲ್ಲಿ ಬಿಜೆಪಿಯವರಿಗೆ ಹೇಳಬಯಸುತ್ತೇನೆ. ಜನರು ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುತ್ತಾರೆ.
ಭಗವಾನ್ ಬಸವಣ್ಣ ಅವರು ಈ ಭೂಮಿಯಿಂದ ಹುಟ್ಟಿದ್ದಾರೆ. ಅವರು ಯಾರ ಮಾತಿಗೂ ಅಂಜದೇ ಎಲ್ಲರನ್ನು ಸಮಾನತೆ ನೀಡುವ ಹೋರಾಟ ಮಾಡಿದ್ದರು. ಇದು ಕುವೆಂಪು ಅವರ ಭೂಮಿಯಾಗಿದ್ದು, ಬಿಜೆಪಿ ಇವರ ತತ್ವಗಳನ್ನು ಪ್ರತಿನಿತ್ಯ ಅಪಮಾನಿಸುತ್ತಲೇ ಬಂದಿದೆ. ದೇಶದ ಇತಿಹಾಸ ಹಾಗೂ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯನ್ನು ನಾಶ ಮಾಡುವ ಪ್ರಯತ್ನ ಮಾಡಬೇಡಿ. ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಇಂತಹ ಸರ್ಕಾರವನ್ನು ತೊಲಗಿಸುವ ಶಪತವನ್ನು ನಿವೆಲ್ಲರೂ ಕೈಗೊಳ್ಳಬೇಕು.
ನೀವು ಸಂತರ ತತ್ವ ಸಿದ್ಧಾಂತದ ಮೇಲೆ ದಾಳಿ ಮಾಡುವವರ ಪರ ನಿಲ್ಲುತ್ತೀರೋ ಅಥವಾ ಎಲ್ಲಾ ವರ್ಗದವರ ಕಲ್ಯಾಣಕ್ಕಾಗಿ ಹೋರಾಟ ಮಾಡುವವರ ಪರವಾಗಿ ನಿಲ್ಲುತ್ತೀರೋ ಎಂಬುದನ್ನು ನೀವು ನಿರ್ಧರಿಸಬೇಕು. ಈ ರಾಜ್ಯವನ್ನು ಲೂಟಿ ಹಾಗೂ ಕಮಿಷನ್ ನಿಂದ ದೂರ ಮಾಡಬೇಕು. ಆಮೂಲಕ ರಾಜ್ಯವನ್ನು ವಿಕಾಸದತ್ತ ತೆಗೆದುಕೊಂಡು ಹೋಗಬೇಕು. ಸಾಮಾಜಿಕ ನ್ಯಾಯ, ಸದ್ಭಾವನೆಯ ಪರಂಪರೆ ರಕ್ಷಿಸಲು ನೀವು ಯಾರ ಪರವಾಗಿ ನಿಲ್ಲುತ್ತೀರಿ?
ಐದು ವರ್ಷಗಳ ಹಿಂದೆ ಇದ್ದ ಸರ್ಕಾರ ತನ್ನ ಮಾತಿಗೆ ಬದ್ಧವಾಗಿ ಕೊಟ್ಟ ಬಹುತೇಕ ಎಲ್ಲಾ ಭರವಸೆ ಈಡೇರಿಸಿದೆ. ಇಂದು ರಾಜಸ್ಥಾನ, ಛತ್ತೀಸಿ ಗಡ, ಹಿಮಾಚಲದಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ಭರವಸೆಗಳನ್ನು ಈಡೇರಿಸಿಕೊಂಡು ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನಿಮ್ಮ ವಿಶ್ವಾಸವನ್ನು ಉಳಿಸಿಕೊಳ್ಳಲಿದೆ. ಗೃಹಲಕ್ಷ್ಮಿ, ಯುವವನಿಧಿ, ಅನ್ನಭಾಗ್ಯ, ಗೃಹಜ್ಯೋತಿ, ಉಚಿತ ಪಯಣ ಯೋಜನೆಗಳನ್ನು ಜಾರಿ ಮಾಡಲಿದೆ.
ರಾಜ್ಯದ ಜನ ಕರ್ನಾಟಕ ರಾಜ್ಯವನ್ನು ಬಿಜೆಪಿಯ ಲೂಟಿಯಿಂದ ರಕ್ಷಿಸಲು ಮೇ 10ರಂದು ನಿಮ್ಮ ಅಮೂಲ್ಯವಾದ ಮತಗಳನ್ನು ಕಾಂಗ್ರೆಸ್ ನ ಪ್ರತಿ ಅಭ್ಯರ್ಥಿಗಳಿಗೆ ನೀಡಿ ಜಯಶೀಲರನ್ನಾಗಿ ಮಾಡಬೇಕು. ಆಮೂಲಕ ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು.
[06/05, 8:34 PM] Kpcc official: *Shri Rahul Gandhi’s travel programme in Karnataka on May 7, 2023:*
Sunday, May 7th
· 15:30 hrs: Corner Meeting at Anekal
· 17:30 hrs: Corner Meeting at Pulakeshinagar
· 20:00 hrs: Joint Public Meeting with Priyanka Gandhi ji at Shivaji Nagar
[06/05, 8:34 PM] Kpcc official: *7 May '23 | Congress President Shri Mallikarjun Kharge's travel program*
10:30 am | Public Meeting in Kamalapur, Gulbarga Rural
4:30 am | Public Meeting in Wadi
7:30 pm | Public Meeting in Kalaburagi North
[06/05, 8:41 PM] Kpcc official: *ಹುಬ್ಬಳ್ಳಿಯ ಸಾರ್ವಜನಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳು*
ಸೋನಿಯಾ ಗಾಂಧಿ ಅವರು ವಿಶೇಷವಾಗಿ ಹುಬ್ಬಳ್ಳಿಗೆ ಆಗಮಿಸುವುದಾಗಿ ಇಲ್ಲಿಗೆ ಬಂದಿದ್ದಾರೆ. ನಾನು ವೈಯಕ್ತಿಕವಾಗಿ ಪಕ್ಷದ ಪರವಾಗಿ ಹಾಗೂ ರಾಜ್ಯದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಕಾಂಗ್ರೆಸ್ ಪಕ್ಷ ದಿನೇ ದಿನೆ ಕಾಂಗ್ರೆಸ್ ಪಕ್ಷದ ಶಕ್ತಿ ಬೆಳೆಯುತ್ತಿರುವುದನ್ನು ತಡೆಯಲು ರಾಜ್ಯದಲ್ಲಿ ಗದ್ದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಹೋರಾಟ ಭ್ರಷ್ಟಾಚಾರ, ಈ ಭಾಗದ ಅಭಿವೃದ್ಧಿ, ಒಗ್ಗಟ್ಟಿನಿಂದ ದೇಶ ಕಟ್ಟುವುದರ ಪರವಾಗಿದೆ. ಇದಕ್ಕಾಗಿ ‘ಜೈ ಬಜರಂಗಬಲಿ ತೋಡ್ ದೋ ಭ್ರಷ್ಟಾಚಾರ್ ಕಿ ನಲಿ’. ಬಿಜೆಪಿ ಅವರು ಕೇವಲ ಮತಕ್ಕಾಗಿ ಜೈ ಬಜರಂಗಬಲಿ ಎನ್ನುತ್ತಾರೆ. ಆದರೆ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರವನ್ನು ತೊಲಗಿಸಲು ಜೈ ಬಜರಂಗ ಬಲಿ ಎನ್ನುತ್ತದೆ. ಈ ಭ್ರಷ್ಟ, 40% ಕಮಿಷನ್ ಸರ್ಕಾರವನ್ನು ಕಿತ್ತೊಗೆದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು.
ಈ ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಧಾನಮಂತ್ರಿಗಳು, ರಾಷ್ಟ್ರಪತಿಗಳಿಗೆ ಪತ್ರ ಬರೆದರೂ ಮೋದಿ ಅವರು ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರು ನಾ ಖಾವೂಂಗಾ ನಾ ಖಾನೇದೂಂಗಾ ಎಂದರು. ಆದರೆ ಭ್ರಷ್ಟಾಚಾರದಲ್ಲಿ ತಿಂದು ತೇಗುತ್ತಿರುವವರು ಮೋದಿ ಅವರ ಅಕ್ಕ ಪಕ್ಕದಲ್ಲೇ ಇದ್ದಾರೆ. ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇವರು ಪ್ರತಿ ನಿತ್ಯ 40% ತಿನ್ನುತ್ತಿದ್ದಾರೆ. ಈ ಹಣವೆಲ್ಲಾ ಎಲ್ಲಿ ಹೋಗಿದೆ?
ಈ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ನೆಹರೂ ಅವರ ಕಾಲದಿಂದಲೂ ನಮ್ಮ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ಈಗ ಅಭಿವೃದ್ಧಿ ನಿಂತಿದೆ. ಇನ್ನು ರಾಜ್ಯದಲ್ಲಿ ದಿನೇ ದಿನೆ ನಿರುದ್ಯೋಗ ಬೆಳೆಯುತ್ತಿದೆ. ದೇಶದಲ್ಲಿ 3 0 ಕೋಟಿ ನಿರುದ್ಯೋಗಿಗಳಿದ್ದಾರೆ. ಕೇಂದ್ರದಲ್ಲಿ 30 ಲಕ್ಷ ಹಾಗೂ ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆದರೂ ಇವುಗಳನ್ನು ತುಂಬುತ್ತಿಲ್ಲ. ಈ ಹುದ್ದೆಗಳನ್ನು ತುಂಬಿದರೆ, ಇದು ಬಡವರ ಕೈ ಸೇರುತ್ತದೆ. ಅವರ ಮಕ್ಕಳ ಹೊಟ್ಟೆ ತುಂಬುದತ್ತೆ. ಅದರಿಂದ ನಾಳೆ ಅವರು ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಾರೆ ಎಂಬ ಉದ್ದೇಶದಿಂದ ಮೋದಿ ಅವರು ಬಡವರ ಬಗ್ಗೆ ಚಿಂತನೆ ಮಾಡುತ್ತಿಲ್ಲ.
ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು, ಯಾರಿಗಾದರೂ ಸಿಕ್ಕಿದೆಯಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು ಯಾರಿಗಾದರೂ ಸಿಕ್ಕಿತಾ? ನಿಮ್ಮ ಆದಾಯ ಡಬಲ್ ಮಾಡುತ್ತೇವೆ ಎಂದರು ಮಾಡಿದರಾ? ಒಬ್ಬ ವ್ಯಕ್ತಿ ಇಷ್ಟು ಸುಳ್ಳು ಹೇಳುತ್ತಾನೆ ಎಂದರೆ ನೀವು ಸುಳ್ಳು ಹೇಳುವವರಿಗೆ ಬೆಂಬಲ ನೀಡುತ್ತೀರೋ, ಸತ್ಯ ನುಡಿಯುವವರಿಗೆ ಬೆಂಬಲ ನೀಡುತ್ತೀರೋ? ರಾಜ್ಯದಲ್ಲಿ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲವಾಗಿದೆ. ಇಂತಹ ಕೆಟ್ಟ ಸರ್ಕಾರವನ್ನು ತೆಗೆದುಹಾಕಬೇಕು. ಈ ಸರ್ಕಾರ ಮೇ 10ರಂದು ಮನೆ ಹೋಗಲಿದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಾವು ನಿಮಗೆ ಕೊಟ್ಟಿರುವ ವಚನ ಈಡೇರಿಸುತ್ತೇವೆ.
ಕಾಂಗ್ರೆಸ್ ಪ್ರಮುಖ ಐದು ಗ್ಯಾರಂಟಿಗಳನ್ನು ಘೋಷನೆ ಮಾಡಿದ್ದೇವೆ ಇದರೊಂದಿಗೆ ಎಲ್ಲ ಐದು ಘೋಷಣೆಗಳನ್ನು ಜಾರಿಗೆ ತರುವುದು ನನ್ನ ಗ್ಯಾರಂಟಿ ಎಂದು ಭರವಸೆ. 10 ಕೆ.ಜಿ. ಅಕ್ಕಿ, 200 ಯೂನಿಟ್ ವಿದ್ಯುತ್, ಯುವನಿಧಿ ಮೂರು ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಗೆ ಎರಡು ಸಾವಿರ ರೂಪಾಯಿ ಹಾಗೂ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಪಾಸ್ ನೀಡುವುದು ನಮ್ಮ ಕಾಂಗ್ರೆಸ್ಸು ಪಕ್ಷದ ಪ್ರಮುಖ ಐದು ಭರವಸೆ ಮತ್ತು ಗ್ಯಾರಂಟಿ. ನಾವು ನುಡಿದಂತೆ ನಡೆಯುತ್ತೇವೆ. ಈ ಹಿಂದೆಯು ನುಡಿದಂತೆ ನಾವು ನಡೆದಿದ್ದೇವೆ.
ನಮ್ಮ ಈ ಯೋಜನೆಗಳ ಬಗ್ಗೆ ಮೋದಿ ಅವರು ಲೇವಡಿ ಮಾಡುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡುತ್ತೇವೆ. ಇದು ನಮ್ಮ ಗ್ಯಾರಂಟಿ. ನಾವು ಎಂದಿಗೂ ವಚನಭ್ರಷ್ಟರಾಗಿಲ್ಲ, ಆಗುವುದೂ ಇಲ್ಲ. ಈ ಐದು ಯೋಜನೆಗಳನ್ನು ಪಡೆಯಲು ಹಾಗೂ ಈ ಭ್ರಷ್ಟ ಸರ್ಕಾರ ತೆಗೆಯಲು ನೀವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮೇ 10ರಂದು ನೀವು ಎದ್ದ ತಕ್ಷಣ ಮೊದಲು ಹೋಗಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು. ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು.
[06/05, 9:50 PM] Kpcc official: *Smt Priyanka Gandhi Vadra's Campaign Schedule in Karnataka*
Date: *7 May 2023*
2:30 P M: Public Meeting। Moodbidri
5:30 P M: Road Show । Mahadevpura
7:00 P M: Public Meeting | Bangalore South
8:30 P M: Joint Public Meeting with Rahul Gandhi Ji | Shivaji Nagar
Post a Comment