ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿ ನಡೆದಿದೆ.

ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ದಾಳಿ ನಡೆಸಿದವರು ಕಾಂಗ್ರೆಸ್ ಕಾರ್ಯಕರ್ತರು ಎಂಬ ಆರೋಪ ಕೇಳಿಬಂದಿದೆ. ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಈ ದಾಳಿ ನಡೆದಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನ ನೀಡದಿರುವುದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ: ರಾಹುಲ್ ಗಾಂಧಿ

ಮಾಣಿ ಜಂಕ್ಷನ್​​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ, ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ನಂತರ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದಾರೆ. ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಪೋಲೀಸರ ತಂಡ ತನಿಖೆ ಆರಂಭಿಸಿದೆ.

ಡಿ.ಕೆ ಶಿವಕುಮಾರ್ ಪೊಲೀಸ್ ಠಾಣೆಗಳನ್ನು ಹಸರೀಕರಣ ಮಾಡುತ್ತಾರಾ?: ಬಸನಗೌಡ ಪಾಟೀಲ್ ಯತ್ನಾಳ್

Post a Comment

Previous Post Next Post