dk ಶಿವಕುಮಾರ updates, ನಾಳೆ ದೆಹಲಿಗೆ ಸಂಭವ, ಆರೋಗ್ಯ ಚೇತರಿಕೆ ಇಲ್ಲ,, ಬೆಂಗಳೂರು: ನಾನು ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು.

[14/05, 11:17 PM] +91 99000 09614: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು.
[15/05, 6:00 PM] Kpcc official: *ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ.

ನಿಮ್ಮ ಹುಟ್ಟುಹಬ್ಬದ  ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತ ದೊಡ್ಡ ಉಡುಗೋರೆ ನಿರೀಕ್ಷಿಸಲು ಸಾಧ್ಯವೇ?  ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’ ಎಂದು ತಿಳಿಸಿದರು.
[15/05, 6:33 PM] Kpcc official: *ಸದಾಶಿವನಗರ ನಿವಾಸದಲ್ಲಿ ಸೋಮವಾರ ಸಂಜೆ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ. 

ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ 135 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಚುನಾವಣೆ ನಡೆಸಿದ ರೀತಿ, ಒಗ್ಗಟ್ಟಿನ ಪ್ರದರ್ಶನ ಎಲ್ಲವೂ ದೇಶಕ್ಕೆ ಮಾದರಿಯಾಗಿದ್ದು, ಅನೇಕ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.. 

ಕೆಲವು ಕಡೆಗಳಲ್ಲಿ ಸ್ಥಳೀಯವಾಗಿ ಉತ್ತಮವಾಗಿ ಸಂಘಟನೆ ಮಾಡಿದ್ದರೆ ನಮ್ಮ ಸಂಖ್ಯೆ ಇನ್ನು ಸ್ವಲ್ಪ ಹೆಚ್ಚಾಗುತ್ತಿತ್ತು. ಆದರೂ  ನಮ್ಮ ಫಲಿತಾಂಶ ತೃಪ್ತಿ ತಂದಿದೆ. ಇಂದು ನಮ್ಮ ವರಿಷ್ಠರು ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ. ನಾನು ಹೋಗುವುದು ಸ್ವಲ್ಪ ತಡವಾಗಲಿದೆ.

ನನ್ನ ವೈಯಕ್ತಿಕ ಬೆಂಬಲಕ್ಕೆ ಹೆಚ್ಚಿನ ಶಾಸಕರ ಸಂಖ್ಯಾಬಲವಿಲ್ಲದಿರಬಹುದು, ಆದರೆ ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಆಯ್ಕೆ ಮಾಡಿದಾಗ ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೆ. ನಾನು ಕೊಟ್ಟ ಮಾತನ್ನು ಈಡೇರಿಸಿದ್ದೇನೆ.

ಬೇರೆಯವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಬೇರೆಯವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಓರ್ವ ವ್ಯಕ್ತಿ. ನಾನು ಧೈರ್ಯವಾಗಿ ಪಕ್ಷವನ್ನು ಮುನ್ನಡೆಸಿದ್ದು, ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಏನೆಲ್ಲಾ ಆಗಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಭವಿಷ್ಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ. ನಾವು ಮೈತ್ರಿ ಸರ್ಕಾರ ಕಳೆದುಕೊಂಡಾಗ ಶಾಸಕರು ಪಕ್ಷ ಬಿಟ್ಟು ಹೋದಾಗ ನಾವು ಧೃತಿಗೆಡಲಿಲ್ಲ. ಧೈರ್ಯವಾಗಿ ಜವಾಬ್ದಾರಿ ಹೊತ್ತು, ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನನಗೆ ಧೈರ್ಯ ತುಂಬಿದ್ದು, ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ತಿಳಿಸಿದರು.

।,।।।। 
ಬೆಂಗಳೂರು: ನಾನು ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು.

ಸೋಮವಾರ ರಾತ್ರಿ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ದೆಹಲಿಗೆ ಹೋಗಬೇಕಿತ್ತು. ಆದರೆ ಆರೋಗ್ಯ ಸರಿಯಿಲ್ಲ, ಹೀಗಾಗಿ ದೆಹಲಿಗೆ ಹೋಗಿಲ್ಲ. ನನ್ನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲ. ನಾಳೆ ಶಿಮ್ಲಾದಿಂದ ದೆಹಲಿಗೆ ಸೋನಿಯಾ ಗಾಂಧಿ ಅವರು ವಾಪಸಾಗುತ್ತಾರೆ. ನಾನು ಸಹ ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತಿದ್ದೇನೆ. ಸೋನಿಯಾ ಗಾಂಧಿರವರು ಬರಲಿ ಅಂತಾ ನಾನು ಕಾಯುತ್ತಿದ್ದೆ ಎಂದು ಹೇಳಿದರು.

ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆ. ನನ್ನ ಜೊತೆ ಯಾವ ಶಾಸಕರು ಇಲ್ಲ, ನನಗೆ ಯಾರ ಬೆಂಬಲ ಬೇಡ. ಯಾರು ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವಂತೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಿದ್ದೀರಿ. ನನ್ನನ್ನು ಚಪ್ಪಡಿ ಬೇಕಾದರೂ ಮಾಡಿಕೊಳ್ಳಿ, ದಿಂಡು ಮಾಡಿಕೊಳ್ಳಿ. ಜಲ್ಲಿ ಬೇಕಾದರೂ ಮಾಡಿಕೊಳ್ಳಿ. ಸದ್ಯ ಆರೋಗ್ಯ ಸಮಸ್ಯೆಯಾಗಿದೆ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದರು.

ಹೆಲ್ತ್‌ ಚೆಕಪ್‌ ಬಳಿಕ ವೈದ್ಯ ಡಾ. ಶಂಕರ್ ಗುಹಾ ಹೇಳಿದಿಷ್ಟು

ಸದಾಶಿವನಗರದ ನಿವಾಸದಲ್ಲಿ ಡಿಕೆ ಶಿವಕುಮಾರ್​ ಹೆಲ್ತ್‌ ಚೆಕಪ್‌ ಬಳಿಕ ವೈದ್ಯ ಡಾ. ಶಂಕರ್ ಗುಹಾ ಹೇಳಿಕೆ ನೀಡಿದ್ದು, ಬಿಪಿ ಚೆಕ್ ಮಾಡಲಾಗಿದೆ, ಬೇಸಿಕ್‌ ಮೆಡಿಸನ್‌ ನೀಡಲಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಸತತವಾಗಿ ಓಡಾಡಿದ್ದಾರೆ. ಮೂರು ಗಂಟೆ ವಿಶ್ರಾಂತಿ ಪಡೆದುಕೊಳ್ಳಲು ಸಲಹೆ ನೀಡಲಾಗಿದೆ. ಸದ್ಯಕ್ಕೆ ಯಾವುದೇ ಪ್ರಯಾಣ ಬೇಡವೆಂದು ಸಲಹೆ ನೀಡಲಾಗಿದೆ ಎಂದು ಹೇಳಿದರು.

ಒಕ್ಕಲಿಗ, ಕುರುಬ, ದಲಿತರ ಬೇಡಿಕೆ ಆಯ್ತು; ಲಿಂಗಾಯತ ‌ಸ್ವಾಮೀಜಿಯಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಡ

ಹೊಟ್ಟೆಯಲ್ಲಿ ಸೋಂಕಿನಿಂದ ಲೂಸ್‌ ಮೋಷನ್‌ ರೀತಿ ಆಗಿದೆ. ಪ್ರಯಾಣ ಎಷ್ಟು ಮುಖ್ಯವೋ ಆರೋಗ್ಯ ಸಹ ಅಷ್ಟೇ ಮುಖ್ಯ. ನಾಳೆ ಮುಂಜಾನೆ ಸಹ ಬಂದು ತಪಾಸಣೆ ಮಾಡಲಾಗುತ್ತದೆ.

ಕಗ್ಗಂಟಾದ ಸಿಎಂ ಆಯ್ಕೆ

ರಾಜ್ಯ ವಿಧಾನಸಭೆ ಫಲಿತಾಂಶ ಬಂದು ಎರಡು ದಿನವಾದ್ರೂ ಮುಖ್ಯಮಂತ್ರಿ ಆಯ್ಕೆ ಮಾತ್ರ ಕಗ್ಗಂಟಾಗೇ ಉಳಿದಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲೇ ಸುದೀರ್ಘ ಸಭೆ ನಡೆಸಿದ್ದ ಎಐಸಿಸಿ ವೀಕ್ಷಕರು ಕಾಂಗ್ರೆಸ್‌ನ 135 ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದರು. ಅಷ್ಟೇ ಅಲ್ಲದೇ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಕೆಲ ಶಾಸಕರೊಂದಿಗೆ ದೆಹಲಿಗೆ ಹಾರಿದ್ದಾರೆ.



Post a Comment

Previous Post Next Post