ಮೇ 17, 2023 | , | 9:17PM |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಷ್ಠಿತ ಸ್ಥಾನಕ್ಕಾಗಿ ಸಕ್ರಿಯವಾಗಿ ಲಾಬಿ ನಡೆಸುತ್ತಿದ್ದಾರೆ. ಇಂದು ಸಂಜೆ ಶ್ರೀ ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ ಶ್ರೀ ಸುರ್ಜೇವಾಲಾ ಅವರೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡಾರೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಖಾಂಡಾರೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಇಂದೇ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದುಕೊಂಡಿದೆ.
Post a Comment