*ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಬಿಜೆಪಿ ಸಂಸದ ಲಹರ್ ಸಿಂಗ್ ತಿರುಗೇಟು*
*"ಕಾಂಗ್ರೆಸ್‌ನಲ್ಲಿ ಸಮರ್ಥ ನಾಯಕರು ಇರಲಿಲ್ಲವೇ? ಜೆಡಿಎಸ್ ನಿಂದ ಸಿದ್ದರಾಮಯ್ಯನವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲು ಕಾರಣವೇನು?" - ಲಹರ್ ಸಿಂಗ್ ಪ್ರಶ್ನೆ*
ಸಂಸತ್ ಸದಸ್ಯ ಲಹರ್ ಸಿಂಗ್ ಅವರ 'X' ಪೋಸ್ಟ್ ಲಿಂಕ್: https://x.com/LaharSingh_MP/status/1721402488492785949?s=20
[ಲಹರ್ ಸಿಂಗ್ ಅವರ ಹೇಳಿಕೆಯ ಕನ್ನಡ ಅವತರಣಿಕೆ:
_"ಬಿಜೆಪಿಯಲ್ಲಿ ವಿಪಕ್ಷ ನಾಯಕರಾಗಲು ಸಮರ್ಥರಿಲ್ಲವೇ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಂದಾಳತ್ವ ವಹಿಸಲು ಬಿಜೆಪಿಯವರು ಏಕೆ ಕೇಳುತ್ತಿದ್ದಾರೆ ಎಂದು ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಆದರೆ, ಮೊದಲು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಸಮರ್ಥ ನಾಯಕರಿರಲಿಲ್ಲವೇ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿ."_
_"ಜೆಡಿಎಸ್ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಆಮದು ಮಾಡಿಕೊಂಡಿದ್ದು ಏಕೆ? ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಅಥವಾ ಎಂ.ಬಿ.ಪಾಟೀಲ್ ಅವರನ್ನೇ ಏಕೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿಲ್ಲ?"]_
ಪಂಪ್‍ಸೆಟ್‍ಗೆ ರೈತರ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಸಲಕರಣೆ ಸರಕಾರದ ಆದೇಶ - ಈರಣ್ಣ ಕಡಾಡಿ ಖಂಡನೆ
ಬೆಂಗಳೂರು: ಇನ್ನು ಮುಂದೆ ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ. ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲಾದ ರೈತರ ಗಾಯದ ಮೇಲೆ ಬರೆ ಎಳೆದಂತಿದೆ. ಅಲ್ಲದೆ, ಇದು ಬಿಸಿ ಕಾವಲಿಯಲ್ಲಿದ್ದ ರೈತರನ್ನು ಸರಕಾರ ಬೆಂಕಿಗೆ ದೂಡಿದಂತಾಗಿದೆ ಎಂದು ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.
ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್‍ಸೆಟ್‍ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಈ ಹಿಂದೆ ಪ್ರತಿ ನೀರಾವರಿ ಪಂಪ್‍ಸೆಟ್‍ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೆ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ರೈತರ ಆತಂಕ ಹೆಚ್ಚಾಗಿದ್ದು, ಪರಿಣಾಮವಾಗಿ ರೈತರು ಮುಂದೇನು ಎಂದು ಯೋಚಿಸುವಂತಾಗಿದೆ ಎಂದು ವಿವರಿಸಿದ್ದಾರೆ.
ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೋಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಗಮನ ಸೆಳೆದಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಿಕಾರಿ ಸಂಗತಿಯಾಗಿದೆ. ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆÀ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ; ಜೊತೆಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೋಗಿದ್ದಾರೆ ಎಂದು ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ. ರೈತರ ಕೃಷಿ ಪಂಪಸೆಟ್‍ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ. ಸರಕಾರವು ತನ್ನ ಈ ಆದೇಶವನ್ನು ಹಿಂಪಡೆಯದಿದ್ದರೆ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ಮಂಡಲಗಳಲ್ಲಿ ನ.10 ರಂದು ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಬರ ಸಂಬಂಧ ಜನರ ಮೂಗಿಗೆ ತುಪ್ಪ ಸವರುವ
ಸಿಎಂ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರು ಸಿಎಂ ಆಗಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂಬ ಅರ್ಥದಲ್ಲಿ ಪ್ರಧಾನಿಯವರು ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು ನುಡಿದಂತೆ ನಡೆದಿಲ್ಲ. ಯಾವುದೇ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ ಎಂದಿದ್ದಾರೆ. ನಾವೇನೂ ಗ್ಯಾರಂಟಿ ವಿರೋಧಿಗಳು ಅಲ್ಲ. ಖಜಾನೆಯಲ್ಲಿರುವ ಹಣ ಗಮನಿಸದೆ ಜನರಿಗೆ ಕೊಟ್ಟ ಆಶ್ವಾಸನೆ ಉಳಿಸಿಕೊಳ್ಳುವುದು ಹೇಗೆ? ನಿಜವಾಗಿ ನಾವು ಕೊಟ್ಟ ಆಶ್ವಾಸನೆಗಳನ್ನು ಉಳಿಸಿಕೊಳ್ಳಲು ಸಾಧ್ಯವೇ ಎಂಬುದನ್ನು ವಿವೇಚಿಸಬೇಕಾಗಿತ್ತು; ಮತ್ತು ಆ ನಿಟ್ಟಿನಲ್ಲಿ ಪರಿಜ್ಞಾನ ಇರಬೇಕಿತ್ತು ಎಂದು ತಿಳಿಸಿದ್ದಾಗಿ ವಿವರಿಸಿದರು.
ಸಂಪೂರ್ಣವಾಗಿ ಇಡೀ ಸರಕಾರವು ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ಹೋಗಿದೆ. ಭ್ರಷ್ಟಾಚಾರದ ಕಾರಣದಿಂದ ರಾಜ್ಯ ದಿವಾಳಿ ಆಗಿದೆ. ಬರ ಪರಿಸ್ಥಿತಿ ತೀವ್ರವಾಗಿದೆ. ಕುಡಿಯುವ ನೀರಿನ ಸಮಸ್ಯೆಯೂ ಹೆಚ್ಚಾಗಿದೆ. ಇವೆಲ್ಲವನ್ನೂ ಸರಕಾರ ಗಮನಿಸುತ್ತಿಲ್ಲ ಎಂಬುದನ್ನು ಎಚ್ಚರಿಕೆಯ ರೂಪದಲ್ಲಿ ಪ್ರಧಾನಿಯವರು ತಿಳಿಸಿದ್ದಾರೆ. ಆದರೆ, ಸಿದ್ದರಾಮಯ್ಯನವರು ಅದನ್ನು ಬೇರೆ ರೀತಿಯಲ್ಲಿ ತೆಗೆದುಕೊಂಡು ಪುರಾವೆ ಕೇಳುತ್ತಿದ್ದಾರೆ. ಏನು ಪುರಾವೆ ಬೇಕಿತ್ತು ನಿಮಗೆ ಎಂದು ಪ್ರಶ್ನಿಸಿದರು.
5 ಗ್ಯಾರಂಟಿ ಕೊಟ್ಟಿದ್ದೀರಲ್ಲ? ಯಾವ ಗ್ಯಾರಂಟಿ ಸರಿಯಾಗಿ ಜನರಿಗೆ ತಲುಪಿದೆ ಹೇಳಿ? ಎಂದು ಕೇಳಿದರು. ಸಿಎಂ ಪ್ರತಿದಿನ ಸುಳ್ಳು ಹೇಳುತ್ತಾರೆ. ನಿಮ್ಮ ಡಿಸಿಎಂ ಡಿ.ಕೆ.ಶಿವಕುಮಾರರನ್ನು ನಂಬುತ್ತೀರಾ? ಸಿಎಂ ರವರು ಶಿವಕುಮಾರರಿಗೆ ಗೌರವ ಕೊಡುತ್ತೀರಾ? ಎಂದು ಕೇಳಿದರು.
ಬಿಜೆಪಿಯವರಿಗೆ ಸುಳ್ಳು ಹೇಳಲು ಬರುವುದಿಲ್ಲ ಎಂದು ಶಿವಕುಮಾರರು ಹೇಳಿದ್ದಾರೆ. ನಾವಾದರೆ ಶೇ 40 ಕಮಿಷನ್ ಬಗ್ಗೆ ಜನರಿಗೆ ತಿಳಿಸಿ, 135 ಸೀಟು ಗೆದ್ದಿದ್ದಾಗಿ ತಿಳಿಸಿದ್ದಾರೆ. ಅವರ ಸರ್ಟಿಫಿಕೇಟ್ ಇದೆ. ಸಿಎಂ ಯಾಕೆ ತಪ್ಪು ಮಾಹಿತಿ ಕೊಡುತ್ತಾರೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಸಿದ್ದರಾಮಯ್ಯ ಪ್ರತಿದಿನ ಸುಳ್ಳು ಹೇಳಿ ಸುಳ್ಳುರಾಮಯ್ಯ ಆಗಿದ್ದಾರೆ. ಬರ ಪರಿಸ್ಥಿತಿಗೆ ಮೊನ್ನೆ 5 ಸಾವಿರ ಕೋಟಿ ಬಿಡುಗಡೆ ಮಾಡಿದ ಹೇಳಿಕೆ ಕೊಟ್ಟಿದ್ದರು. ವಾಸ್ತವವಾಗಿ ಬಿಡುಗಡೆ ಆದುದು 124 ಕೋಟಿ ಎಂದು ಟೀಕಿಸಿದರು.
ಬರದ ವಿಚಾರದಲ್ಲಿ ಸಿದ್ದರಾಮಯ್ಯನವರು ಜನರ ಮೂಗಿಗೆ ತುಪ್ಪ ಸವರುತ್ತಿದ್ದಾರಾ ಎಂದು ಪ್ರಶ್ನಿಸಿದ ಅವರು, ನಿಮ್ಮ ಆಡಳಿತ ಎಲ್ಲಿ ಹೋಗಿದೆ? ನಿಮ್ಮ ಆಡಳಿತದ ಅರಿವು ಜನರಿಗೆ ಆಗಿದೆ ಎಂದು ತಿಳಿಸಿದರು. ಪಂಚರಾಜ್ಯ ಚುನಾವಣೆಗೆ ಇಲ್ಲಿಂದ ದುಡ್ಡು ಕಳಿಸುತ್ತಿದ್ದೀರಿ. ಬರ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಲು ನಿಮ್ಮ ಸಚಿವರೇ ಬರುತ್ತಿಲ್ಲ ಎಂದು ಆಕ್ಷೇಪಿಸಿದರು.
ಜಿಲ್ಲಾಧಿಕಾರಿಗಳ ಬಳಿ ಹಣ ಇದ್ದರೂ ಅದನ್ನು ಬಿಡುಗಡೆ ಮಾಡುತ್ತಿಲ್ಲ. ಇಂಥ ದುಸ್ಥಿತಿ ಇದ್ದರೂ ಮೀನಮೇಷ ಎಣಿಸುತ್ತಿದ್ದೀರಲ್ಲವೇ ಎಂದು ಟೀಕಿಸಿದರು. ನಿಮ್ಮ ಕೆಲಸ ಮಾಡದೆ ಕೇವಲ ಕೇಂದ್ರದ ಕಡೆ ಬೆರಳು ತೋರಿಸುತ್ತಿದ್ದೀರಿ ಎಂದು ನುಡಿದರು.
5 ಗಂಟೆ ರೈತರಿಗೆ ಕರೆಂಟ್ ಸರಬರಾಜು ಎಂದರೂ 2 ಗಂಟೆ ಕೊಡಲು ಸಾಧ್ಯವಾಗುತ್ತಿಲ್ಲ. ವಿದ್ಯುತ್ ಅಸಮರ್ಪಕ ಸರಬರಾಜಿನಿಂದ ಟಿ.ಸಿ.ಗಳು ಸುಟ್ಟು ಹೋಗುತ್ತಿವೆ. ರೈತರಿಗೆ ಕೆಟ್ಟ ಪರಿಸ್ಥಿತಿ ಇದೆ. ದರಿದ್ರವನ್ನೇ ಹೊತ್ತು ಬಂದಿದ್ದಾರೆ. ಇನ್ನೈದು ವರ್ಷ ಕಾಂಗ್ರೆಸ್ ಆಡಳಿತ ಮಾಡಿದರೆ ಆ ದರಿದ್ರವು ರಾಜ್ಯವನ್ನೇ ನಿರ್ನಾಮ ಮಾಡಲಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದರು.
ತಾಳಿ, ಕಾಲುಂಗುರ ತೆಗೆಸುವುದು ಯಾವ ಸಂಸ್ಕøತಿ?
ಸುಮಂಗಲೆಯರಿಗೆ ತಾಳಿ, ಕಾಲುಂಗುರ ಬಹಳ ಮುಖ್ಯ. ಒಂದು ಪರೀಕ್ಷೆಗಾಗಿ ತಾಳಿ, ಕಾಲುಂಗುರ ತೆಗೆಸುತ್ತೀರಲ್ಲವೇ? ನಿಮಗೆ ನಾಚಿಕೆ ಆಗಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಹಿಳೆಯರಿಗೆ ಗೌರವ ಕೊಡುವುದೇ ಆದರೆ, ಇದನ್ನೆಲ್ಲ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು. ಪರೀಕ್ಷಾ ನ್ಯೂನತೆ ಸರಿಪಡಿಸುವುದನ್ನು ಬಿಟ್ಟು ತಾಳಿ, ಕಾಲುಂಗುರ ತೆಗೆಸುವುದು ಯಾವ ಸಂಸ್ಕøತಿ ಎಂದು ಕಿಡಿಕಾರಿದರು. ಇಂಥ ಕೆಟ್ಟ ಪರಂಪರೆಯ ಸರಕಾರ ಇರಬೇಕೇ ಎಂದೂ ಕೇಳಿದರು.
ಕಲೆಕ್ಷನ್ ಮಾಡುವ ಡಿ.ಕೆ.ಶಿವಕುಮಾರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ತನಿಖೆ ಮಾಡಿದ್ದೀರಾ? 102 ಕೋಟಿ ಬಗ್ಗೆ ಉತ್ತರ ನೀಡಿದ್ದೀರಾ? ಅದು ನಿಮ್ಮ ಹಣವಾದ ಕಾರಣ ಉತ್ತರ ಕೊಡುತ್ತಿಲ್ಲ ಎಂದು ಜನರು ಭಾವಿಸಿದ್ದಾರೆ ಎಂದು ತಿಳಿಸಿದರು. ಎಲ್ಲವನ್ನೂ ಮುಚ್ಚಿಡಲು ನೋಡುತ್ತಿದ್ದಾರೆ. ಶೇ 60 ಕಮಿಷನ್ ಕುರಿತು ಉತ್ತರಿಸಿ ಎಂದು ಆಗ್ರಹಿಸಿದರು.
ಸಿದ್ದರಾಮಯ್ಯರಿಗೆ ಭಯ ಬಂದು 5 ವರ್ಷ ನಾನೇ ಸಿಎಂ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರಕಾರ ತುಂಬ ಅಭದ್ರವಾಗಿದೆ. ಅವರಿಗೆ ಅಭದ್ರತೆ ಕಾಡುತ್ತಿರುವ ಕಾರಣ ನೀವು ವಿ
ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು, ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ. ವೇದಾಧ್ಯಯನ, ಸಂಹಿತಾ ಯಾಗಗಳ ವಿಚಾರದಲ್ಲಿ ಸಾಧಕರಾಗಿದ್ದರು. ಇವರ ಸಾಧನೆಗಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳು ಪ್ರಾಪ್ತವಾಗಿದ್ದವು ಎಂದು ತಿಳಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment