ಸರಕಾರ ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿನ ಭಾಷಾ ಕೀಳರಿಮೆ ತೊಡೆದುಹಾಕುತ್ತದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
@ಅಮಿತ್ ಶಾಗುಜರಾತಿನ ಕಲೋಲ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸ್ವಾಮಿನಾರಾಯಣ ವಿಶ್ವಮಂಗಲ ಗುರುಕುಲದ ವೈದ್ಯಕೀಯ ಕಾಲೇಜು ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಶಾ, ದೇಶದ ಸಮಗ್ರ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ, ಸರ್ಕಾರವು ದೇಶದಲ್ಲಿ ವೈದ್ಯಕೀಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣದ ವ್ಯಾಪ್ತಿಯನ್ನು ವಿಸ್ತರಿಸಿದೆ ಮಾತ್ರವಲ್ಲದೆ ಹಲವಾರು ಶೈಕ್ಷಣಿಕ ಪಠ್ಯಕ್ರಮಗಳನ್ನು ಪರಿಷ್ಕರಿಸಿದೆ. ಸ್ಟಾರ್ಟ್‌ಅಪ್‌ಗಳ ಮಹತ್ವವನ್ನು ಒತ್ತಿ ಹೇಳಿದ ಗೃಹ ಸಚಿವರು, ಯುವ ಉದ್ಯಮಿಗಳನ್ನು ಉತ್ತೇಜಿಸಲು ಸರ್ಕಾರವು ಅನುಕೂಲಕರ ವಾತಾವರಣವನ್ನು ಒದಗಿಸುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿನ ಭಾಷಾ ಕೀಳರಿಮೆ ತೊಡೆದುಹಾಕಲು ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ತಂದಿದೆ ಮತ್ತು ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣವನ್ನು ಉತ್ತೇಜಿಸುತ್ತಿದೆ ಎಂದು ಶ್ರೀ ಶಾ ಹೇಳಿದರು.
ಈ ದಿನದ ಭೇಟಿಯಲ್ಲಿ ಸಚಿವರು ತಮ್ಮ ಲೋಕಸಭಾ ಕ್ಷೇತ್ರ ಗಾಂಧಿನಗರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Post a Comment