ಆಸ್ಟ್ರೇಲಿಯಾದ ಪ್ರಧಾನಿಯಾಗಿ ಮರುಚುನಾವಣೆಗೊಂಡ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

ಆಸ್ಟ್ರೇಲಿಯಾದ ಪ್ರಧಾನಿಯಾಗಿ ಮರುಚುನಾವಣೆಗೊಂಡ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

ಆಸ್ಟ್ರೇಲಿಯಾದ ಪ್ರಧಾನಿಯಾಗಿ ಆಯ್ಕೆಯಾದ ಆಂಥೋನಿ ಅಲ್ಬನೀಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ಮೋದಿ ಅವರು, “ಶ್ರೀ ಅಲ್ಬನೀಸ್ ಅವರ ನಾಯಕತ್ವದಲ್ಲಿ ಆಸ್ಟ್ರೇಲಿಯಾದ ಜನರ ಶಾಶ್ವತ ನಂಬಿಕೆಯನ್ನು ಈ ಮಹತ್ವದ ಜನಾದೇಶ ಸೂಚಿಸುತ್ತದೆ” ಎಂದು ಬರೆದಿದ್ದಾರೆ. ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸಲು ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನವನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ಮೋದಿ ಹೇಳಿದರು.

Post a Comment

Previous Post Next Post